ರಾಜಕಾರಣಕ್ಕೆ ಗುಡ್ ಬೈ ಹೇಳಿದ ಬಿಜೆಪಿ ಸಂಸದ ಗೌತಮ್ ಗಂಭೀರ್!
02/03/2024
ನವದೆಹಲಿ: ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜಕೀಯ ಕರ್ತವ್ಯಗಳಿಂದ ಬಿಡುಗಡೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಳಿ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯಕ್ಕೆ ಧುಮುಕಿದ್ದ ಗೌತಮ್ ಗಂಭೀರ್ ಸಂಸತ್ ಪ್ರವೇಶಿಸಿದ್ದರು.
ಇದೀಗ 2024ನೇ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ತನ್ನನ್ನು ರಾಜಕೀಯ ಚಟುವಟಿಕೆಗಳಿಂದ ಮುಕ್ತಗೊಳಿಸುವಂತೆ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರೋದಾಗಿ ಅವರು ತಿಳಿಸಿದ್ದಾರೆ.
ಇನ್ನೂ ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಇದೇ ವೇಳೆ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

























