ಮಾಧ್ಯಮಗಳ ಪ್ರಶ್ನೆಗೆ ಗರಂ ಆದ ಬಿಜೆಪಿ ಸಂಸದ ಸುರೇಶ್ ಗೋಪಿ: ನಟನ ಸಿಟ್ಟಿಗೆ ಕಾರಣವೇನು..?

ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿರುವ ನಟ ಸುರೇಶ್ ಗೋಪಿ ಅವರು ಕೇರಳದ ಪ್ರಮುಖ ಮೀಡಿಯಾ ವನ್ ಚಾನೆಲ್ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯ ಸಚಿವ ಸ್ಥಾನ ನಿಮಗೆ ತೃಪ್ತಿಯೇ ಎಂಬ ಪ್ರಶ್ನೆಗೆ ಅವರು ಕೊಟ್ಟ ಉತ್ತರ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ನನ್ನ ಬಯಕೆ ಏನು ಅನ್ನುವುದು ಎಲ್ಲರಿಗೂ ಗೊತ್ತು. ಅದನ್ನು ಇನ್ನೂ ಹೇಳುವೆ. ಕೇರಳಕ್ಕಾಗಿ ಪಟ್ಟು ಹಿಡಿದು ಕೆಲಸ ಮಾಡುವೆ. ಆದರೆ ಮೀಡಿಯಾ ಒಂದು ಸಂವಿಧಾನವನ್ನು ಎಷ್ಟು ಗೌರವಿಸುತ್ತದೆ ಅನ್ನೋದು ನನಗೆ ಗೊತ್ತು ಎಂದವರು ಹೇಳಿದ್ದಾರೆ.
ದಿನದ ಹಿಂದೆ 72 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರಲ್ಲಿ ಸುರೇಶ ಗೋಪಿ ಕೂಡ ಒಬ್ಬರು. ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಸಿಗುತ್ತದೆ ಎಂದು ನಂಬಲಾಗಿತ್ತು. ಆದರೆ ಇದೀಗ ಅವರಿಗೆ ರಾಜ್ಯ ಸಚಿವ ಸ್ಥಾನವನ್ನು ನೀಡಲಾಗಿದೆ. ಈ ಮೊದಲು ಮೀಡಿಯಾ ವನ್ ವರದಿಗಾರ್ತಿಯ ಜೊತೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸುರೇಶ್ ಗೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth