3:42 PM Friday 11 - September 2026

ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿಯುವವರಿಗೆ 1 ಲಕ್ಷ ರೂ. | ಪ್ರತಿಭಾ ಕುಳಾಯಿ

08/02/2021

ಮಂಗಳೂರು:  ಬಿಲ್ಲವರ ಮೂಲ ಪುರುಷರಾದ ಕೋಟಿ ಚೆನ್ನಯರ ವಿರುದ್ಧ ಹಾಗೂ ಜನಾರ್ದನ ಪೂಜಾರಿ ವಿರುದ್ಧ  ಕೀಳಾಗಿ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ವಿರುದ್ಧ ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗದೀಶ್ ಅವರು ಗರೋಡಿಗೆ ತೆರಳಿ ಜನಾರ್ಧನ ಪೂಜಾರಿಯವರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕೆಂದು ಪ್ರತಿಭಾ ಒತ್ತಾಯಿಸಿದ್ದಾರೆ. ಅಲ್ಲದೇ ಜಗದೀಶ್ ಅಧಿಕಾರಿಯ ಮುಖಕ್ಕೆ ಮಸಿ ಬಳಿಯುವವರಿಗೆ ತಾನು 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಅವರು ಹೇಳಿದ್ದಾರೆ.

ಜನಗದೀಶ್ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋವನ್ನು ಪ್ರತಿಭಾ ಕುಲಾಯಿ ಫೇಸ್ ಬುಕ್ ನಲ್ಲಿ ಹಾಕಿದ್ದು ವಿಡಿಯೋ ವ್ಯಾಪಕ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version