ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹಾಕಿ ಧರ್ಮ ರಕ್ಷಣೆಗೆ ಕಳುಹಿಸುವುದಿಲ್ಲ: ಪ್ರಿಯಾಂಕ್ ಖರ್ಗೆ - Mahanayaka

ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹಾಕಿ ಧರ್ಮ ರಕ್ಷಣೆಗೆ ಕಳುಹಿಸುವುದಿಲ್ಲ: ಪ್ರಿಯಾಂಕ್ ಖರ್ಗೆ

priyank kharge
22/01/2023

ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಜೀವನದಲ್ಲಿ ಕೇಸರಿ ಶಾಲು ಹಾಕಿ ಧರ್ಮ ರಕ್ಷಣೆಗೆ ಕಳುಹಿಸೋದಿಲ್ಲ. ಆದರೆ ಬಡವರ ಮಕ್ಕಳಿಗೆ ಕೇಸರಿ ಶಾಲು ಹಾಕಿ ಅವರ ಜೀವನದ ಜೊತೆ ಆಟ ಆಡೋಕೆ ಎರಡು ಬಾರಿ ಯೋಚಿಸದೆ ಮುಂದಾಗುತ್ತಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,  ನಾನು ನನ್ನ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡುತ್ತಿದ್ದೇನೆ. ಅದೇ ರೀತಿ ನಿಮ್ಮ ಮಕ್ಕಳಿಗೆ ಕೂಡ ಉನ್ನತ ಶಿಕ್ಷಣ ಕೊಡಲು ಕೆಲಸ ಮಾಡುತ್ತೇನೆ. ನಾನು ಸಮಾಜ ಕಲ್ಯಾಣ ಇಲಾಖೆ ಸಚಿವನಿದ್ದಾಗ ಪ್ರಭುದ್ಧ ಯೋಜನೆ ಜಾರಿಗೆ ತಂದು ನೂರಾರು ಬಡ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಓದೋಕೆ ಅವಕಾಶ ಕಲ್ಪಿಸಿದ್ದೆ. ಇದು ಕಾಂಗ್ರೆಸ್ ಪಕ್ಷದ ಹೋರಾಟ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಬಿಜೆಪಿ ನಾಯಕರು ಅಧಿಕಾರಕ್ಕಾಗಿ, ಒಂದು ಚುನಾವಣೆ ಗೆಲ್ಲೋಕೆ ಪರೇಶ್ ಮೆಸ್ತಾ ಹೆಸರಲ್ಲಿ 1600 ಹಿಂದೂ ಯುವಕರ ಜೀವನದ ಜೊತೆ ಆಟ ಆಡಿ ಅವರ ಮೇಲೆ ಕೇಸ್ ಮಾಡಿಸಿ ಅಧಿಕಾರಕ್ಕೆ ಏರಿ 40% ಕಮಿಷನ್ ಮಾಡಿ ಆರಾಮಾಗಿದ್ದಾರೆ.  ನಿಮಗೆ ಏನು ಬೇಕು ಅಂತ ನೀವೇ ನಿರ್ಧರಿಸಿ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ