ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದ ಬಿಜೆಪಿ: ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು - Mahanayaka
12:22 PM Thursday 8 - January 2026

ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದ ಬಿಜೆಪಿ: ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು

suresh gopi
04/06/2024

ಕೇರಳದ ತ್ರಿಶ್ಶೂರ್ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಸುರೇಶ್ ಗೋಪಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಕೇರಳದಲ್ಲಿ ಬಿಜೆಪಿ ಖಾತೆ ತೆರೆದಿದೆ.

ಈ ಬಾರಿ ತ್ರಿಶ್ಶೂರ್ ಲೋಕಸಭಾ ಕ್ಷೇತ್ರ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ನಟ, ರಾಜಕಾರಣಿ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಇದೀಗೆ ಭರ್ಜರಿ ಗೆಲುವು ದಾಖಲಿಸುವ ಮೂಲಕ ಬಿಜೆಪಿಗೆ ಮೊದಲ ಬಾರಿ ಕೇರಳದಲ್ಲಿ ಗೆಲುವು ದಾಖಲಿಸಿದ್ದಾರೆ.

ಪ್ರತಿಸ್ಪರ್ಧಿ ಸಿಪಿಐನ ವಿ.ಎಸ್. ಸುನೀಲ್ ಕುಮಾರ್ ಮತ್ತು ಕಾಂಗ್ರೆಸ್ ನ ಕೆ.ಮುರಳೀಧರನ್ ಅವರೆದುರು ಸುರೇಶ್ ಗೋಪಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಹಾಗೂ ಸಿಪಿಐ ಸ್ಪರ್ಧೆಯು ಬಿಜೆಪಿಯ ಗೆಲುವಿಗೆ ಕಾರಣವಾಯಿತು.

ಸುಮಾರು 30 ಸಾವಿರ ಮತಗಳ ಅಂತರದಲ್ಲಿ ಸುರೇಶ್ ಗೋಪಿ ಗೆದ್ದಿದ್ದಾರೆ. ಈ ಮೂಲಕ ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅರಳಿದ್ದು, ಬಿಜೆಪಿ ಹೈಕಮಾಂಡ್ ನ ಕನಸು ನನಸಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ