ಹೋಳಿ ಹಬ್ಬದ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿಯೆಟ್ನಾಂನಲ್ಲಿದ್ದರು: ಬಿಜೆಪಿ ಆರೋಪ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ವಿಯೆಟ್ನಾಂ ಮತ್ತು ಇತರ ದೇಶಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇಂತಹ ಅಘೋಷಿತ ಪ್ರವಾಸಗಳು ವಿರೋಧ ಪಕ್ಷದ ನಾಯಕನಿಗೆ ಯೋಗ್ಯವಲ್ಲ ಎಂದು ಬಿಜೆಪಿ ಹೇಳಿದ್ದು “ರಾಷ್ಟ್ರೀಯ ಭದ್ರತೆ” ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರವಿಶಂಕರ್ ಪ್ರಸಾದ್, “ವಿಯೆಟ್ನಾಂನಲ್ಲಿ ಹೊಸ ವರ್ಷ, ವಿಯೆಟ್ನಾಂನಲ್ಲಿ ಹೋಳಿ? ಅವರು ವಿಯೆಟ್ನಾಂನಲ್ಲಿ ೨೨ ದಿನಗಳ ಸಮಯವನ್ನು ಕಳೆದಿದ್ದಾರೆ. ಆದರೆ ಅವರು ತಮ್ಮ ಸ್ವಂತ ಕ್ಷೇತ್ರವಾದ ರಾಯ್ ಬರೇಲಿಯಲ್ಲಿ ಅಷ್ಟೊಂದು ಸಮಯವನ್ನು ಕಳೆದಿಲ್ಲ ಎಂದು ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿ ಅವರ ವಿಯೆಟ್ನಾಂ ಪ್ರವಾಸದ ಬಗ್ಗೆ ರವಿಶಂಕರ್ ಪ್ರಸಾದ್ ಕಳವಳ ವ್ಯಕ್ತಪಡಿಸಿದರೆ, ಅಮಿತ್ ಮಾಳವೀಯ ಅವರು ಇದು ಗಂಭೀರ ರಾಷ್ಟ್ರೀಯ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj