ಬಿಜೆಪಿ ತನ್ನ ತಾಲಿಬಾನಿ‌ ಮನಸ್ಥಿತಿಯನ್ನು  ಬೆತ್ತಲು‌ ಮಾಡಿಕೊಂಡಿದೆ | ಯೋಗಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗು - Mahanayaka

ಬಿಜೆಪಿ ತನ್ನ ತಾಲಿಬಾನಿ‌ ಮನಸ್ಥಿತಿಯನ್ನು  ಬೆತ್ತಲು‌ ಮಾಡಿಕೊಂಡಿದೆ | ಯೋಗಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗು

siddaramaiha
04/10/2021


Provided by

ಬೆಂಗಳೂರು: ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ಬಿಜೆಪಿ  ತನ್ನ ತಾಲಿಬಾನಿ‌ ಮನಸ್ಥಿತಿಯನ್ನು  ಬೆತ್ತಲು‌ ಮಾಡಿಕೊಳ್ಳುತ್ತಿದೆ. ರೈತರ‌ ಹತ್ಯೆ ನಡೆದ ಸ್ಥಳಕ್ಕೆ ಭೇಟಿ‌ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ  ಅವರನ್ನು ಬಂಧಿಸಿರುವ ಸರ್ಕಾರದ ಕೃತ್ಯ ಖಂಡನೀಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಯೋಗಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಉತ್ತರ ಪ್ರದೇಶದ ಲಿಖಿಂಪುರ್ ಖೇರಿಯಲ್ಲಿ ರೈತರ ಹತ್ಯಾಕಾಂಡ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉತ್ತರಪ್ರದೇಶದ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು,‌ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದು‌ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು‌ ಮಧ್ಯಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಬಿಜೆಪಿಯವರು ಪೋಲಿಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದೆ.  ಉತ್ತರಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಜ್ಯೂಸ್ ಎಂದು ಭಾವಿಸಿ ತಾತನ ಬ್ರಾಂಡಿ ಕುಡಿದ 5 ವರ್ಷದ ಬಾಲಕ, ತಾತ ಇಬ್ಬರೂ ಸಾವು

ಪ್ರವಾದಿಯ ಅವಹೇಳನಾಕಾರಿ ವ್ಯಂಗ್ಯ ಚಿತ್ರ ಬಿಡಿಸಿದ್ದ ವಿವಾದಿತ ಕಲಾವಿದ ಅಪಘಾತದಲ್ಲಿ ಸಾವು!

ಬಿಜೆಪಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಬ್ರಿಟಿಷರು ಕೂಡ ಮಾಡಿರಲಿಲ್ಲ | ಅಖಿಲೇಶ್ ಯಾದವ್

ಕಾರು ಹತ್ತಿಸಿ ಪ್ರತಿಭಟನಾ ನಿರತ ಮೂವರು ರೈತರ ಭೀಕರ ಹತ್ಯೆ ಮಾಡಿದ ಕೇಂದ್ರ ಸಚಿವರ ಪುತ್ರ!

ಲಿಖಿಂಪುರ ರೈತರ ಹತ್ಯಾಕಾಂಡ: ಬಿಎಸ್ ಪಿ ನಾಯಕರನ್ನೂ ಗೃಹ ಬಂಧನದಲ್ಲಿರಿಸಲಾಗಿದೆ | ಮಾಯಾವತಿ

ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ ಪತಿ | ಖರೀದಿಸಿದವನಿಂದ ಮಹಿಳೆಯ ಅತ್ಯಾಚಾರ

ಇತ್ತೀಚಿನ ಸುದ್ದಿ