ಸಂಸದ ಸಿದ್ದೇಶ್ವರ್ ಪತ್ನಿಗೆ ಬಿಜೆಪಿ ಟಿಕೆಟ್: ಆಕ್ರೋಶದಿಂದ ಮೈಮೇಲೆ ಪೆಟ್ರೋಲ್ ಸುರಿದುಕೊಂಡ ಬೆಂಬಲಿಗ - Mahanayaka

ಸಂಸದ ಸಿದ್ದೇಶ್ವರ್ ಪತ್ನಿಗೆ ಬಿಜೆಪಿ ಟಿಕೆಟ್: ಆಕ್ರೋಶದಿಂದ ಮೈಮೇಲೆ ಪೆಟ್ರೋಲ್ ಸುರಿದುಕೊಂಡ ಬೆಂಬಲಿಗ

davanagere
14/03/2024


Provided by

ದಾವಣಗೆರೆ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬುಧವಾರ ಬಿಡುಗಡೆ ಮಾಡಲಾಗಿದೆ. ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.

ಈ ಬಾರಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರು ಸಹ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಅವರಿಗೆ ಟಿಕೆಟ್ ನಿರಾಕರಿಸಿ ಸಿದ್ದೇಶ್ವರ್ ಅವರ ಪತ್ನಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶಗೊಂಡ ಅವರ ಬೆಂಬಲಿಗನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ನಡೆದಿದೆ.

ಗುರುವಾರ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿರುವ ಎಸ್.ಎ.ರವೀಂದ್ರನಾಥ್ ನಿವಾಸದ ಬಳಿಯೇ ಯುವಕ ಪೆಟ್ರೋಲ್ ಸುರಿದು ಕೊಂಡು ಹೈಡ್ರಾಮ ನಡೆಸಿದ ಘಟನೆ ನಡೆಯಿತು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ