5:03 AM Friday 12 - September 2025

ಬಿಜೆಪಿ ನಿಮ್ಮನ್ನು ಕೆರಳಿಸುತ್ತದೆ, ಕಾಂಗ್ರೆಸ್ ಜನತೆಗೆ ಕಾರ್ಯಕ್ರಮ ರೂಪಿಸುತ್ತದೆ: ಸಿಎಂ ಸಿದ್ದರಾಮಯ್ಯ

c.m siddaramaya
05/03/2024

ನೆಲಮಂಗಲ: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆ ಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ

ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎವ್.ಎನ್.ವ್ಯಾಲಿಗೆ ನಾವು ಖರ್ಚು ಮತ್ತು ಈಗ ವೃಷಭಾವತಿ ಯೋಜನೆಯನ್ನು 2240 ಕೋಟಿ ಖರ್ಚು ಮಾಡಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ವಿವರಿಸಿದರು.

ರಾಜ್ಯದ ಜನರಿಗೆ ಅನ್ನ ಕೊಡಬೇಕು. ಅದಕ್ಕಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡ್ತೀವಿ. ನಮಗೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಕೇಂದ್ರದ ಬಿಜೆಪಿ ರಾಜ್ಯದ ಜನರಿಗೆ ಅನ್ನ ಕೊಡಲು ನಿರಾಕರಿಸಿತು. ಬಡವರ ಅನ್ನ ವಿರೋಧಿಸುವ ಬಿಜೆಪಿಗೆ ನಾಚಿಕೆ ಕೂಡ ಆಗಲಿಲ್ಲ. ಬಳಿಕ ನಾವೇ ಅಕ್ಕಿ ಬದಲಿಗೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಹಾಕಿದರೆ, ಈ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಬಡವರನ್ನು ಅವಮಾನಿಸುವುದು ಬಿಜೆಪಿಗೆ ಚಾಳಿ ಆಗಿಬಿಟ್ಟಿದೆ. ಇದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version