ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ : ಸಿಎಂ ಬೊಮ್ಮಾಯಿ - Mahanayaka
10:46 PM Thursday 4 - September 2025

ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ : ಸಿಎಂ ಬೊಮ್ಮಾಯಿ

cm bommai
31/03/2023


Provided by

ಬೆಂಗಳೂರು: ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ದೇವಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಹಳಷ್ಟು ಚುನಾವಣಾ ಸಮೀಕ್ಷೆಗಳು ನಡೆದಿದ್ದು, ಪೈಪೋಟಿ ಯನ್ನೇ ತೋರಿಸುತ್ತಿದೆ. ಕಾಂಗ್ರೆಸ್ ಪರವಾಗಿ ಇಲ್ಲ. ಚುನಾವಣೆಗೆಇನ್ನೂ ಒಂದೂವರೆ ತಿಂಗಳಿದ್ದು, ಬಹಳಷ್ಟು ಬದಲಾವಣೆಗಳು ಕಾಣುತ್ತಿವೆ ಎಂದರು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ:

ಪಟ್ಟಿ ತಯಾರು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನೊಂದು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಅಭಿಪ್ರಾಯ ಸಂಗ್ರಹ

ಸಂಭಾವ್ಯ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ ತಳಮಟ್ಟದ ಕ್ಷೇತ್ರ ಮಟ್ಟದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪಾರಾಮರ್ಶಿಸಿ ಸಂಸದೀಯ ಮಂಡಳಿಗೆ ಸಲ್ಲಿಸಲಾಗುವುದು ಎಂದರು.

ಸಿದ್ದರಾಮಯ್ಯ ಹತಾಶರಾಗಿದ್ದಾರೆ:

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. 2013 ರಲ್ಲಿ ಕೊನೆ ಚುನಾವಣೆ ಎಂದರು. 2018 ರಲ್ಲಿ ಮತ್ತೆ ಸ್ಪರ್ಧಿಸಿದರು. ಈಗ ಪುನಃ ಕನಸು ಕಾಣುತ್ತಿದ್ದಾರೆ. ವ್ಯಕ್ತಿಯೊಬ್ಬರು ಮುಖ್ಯ ಮಂತ್ರಿಯಾಗುವುದು ಮುಖ್ಯ ವಲ್ಲ. ಮುಖ್ಯ ಮಂತ್ರಿಯಾಗಿ ರಾಜ್ಯದ ಜನಕ್ಕೇನು ಮಾಡಬಲ್ಲರು ಎನ್ನುವುದು ಮುಖ್ಯ ಎಂದರು. 2018 ರಲ್ಲಿ ಜನ ತಿರಸ್ಕರಿಸಿದ್ದಾರೆ ಈ ಬಾರಿಯೂ ತಿರಸ್ಕರಿಸಲಿದ್ದಾರೆ ಎಂದರು.

ಬದ್ಧತೆ ಇಲ್ಲ:

ಮೀಸಲಾತಿ ಚುನಾವಣಾ ಗಿಮಿಕ್ ಎಂದಿರುವ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಇದನ್ನು ಅವರಿದಾಗ ಮಾಡಬಹುದಿತ್ತು. ಇದು 30 ವರ್ಷಗಳ ಬೇಡಿಕೆ. ಬದ್ಧತೆ ಇರದ ಕಾರಣ ಅವರು ಈ ಸಾಹಸಕ್ಕೆ ಹೋಗಲಿಲ್ಲ. ಜನರನ್ನು ಮತ ಬ್ಯಾಂಕ್ ಆಗಿ ಕಾಣುತ್ತಾರೆ. ಅವರಿಗೆ ಅಸಾಧ್ಯವಾದುದನ್ನು ಮಾವು ಮಾಡಿದ್ದೇವೆ. ಹೀಗಾಗಿ ಅವರಿಗೆ ತಳಮಳ ಶುರುವಾಗಿದ್ದು, ಎಲ್ಲ ದರಲ್ಲಿಯೂ ರಾಜಕೀಯ ಮಾಡುತ್ತಾರೆ ಎಂದರು.

ವರುಣಾದಲ್ಲಿ ಪ್ರಬಲ ಪೈಪೋಟಿ:

ವರುಣಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿದ ಬಳಿಕ ಬಿಎಸ್ ವೈ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ವರುಣಾದಲ್ಲಿ ನಾವು ಖಂಡಿತವಾಗಿ ಪ್ರಬಲವಾದ ಪೈಪೋಟಿ ನೀಡುತ್ತೇವೆ.
ವಿಜಯೇಂದ್ರ ಅವರು ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯವಿದೆ. ಅಂತಿಮವಾಗಿ ಎಲ್ಲಿ ನಿಲ್ಲಬೇಕು ಎಂಬುದನ್ನ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ