ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ ಬಿಜೆಪಿ! - Mahanayaka

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ ಬಿಜೆಪಿ!

cwata
04/06/2024

ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿ ಈ ಬಾರಿಯೂ ಗೆಲುವು ದಾಖಲಿಸಿದೆ.

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್ ಅವರನ್ನು ಸೋಲಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಪ್ರಕಟವಾಗಬೇಕಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನ ಪಕ್ಷ ಸಂಘಟನೆಯ ಕಳಪೆ ಪ್ರದರ್ಶನ ಮತ್ತೆ ಬಹಿರಂಗಗೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

ಆರ್. ಪದ್ಮರಾಜ್ ಅವರು ಉತ್ತಮ ಸ್ಪರ್ಧೆ ನೀಡಿದ್ದರು. ಆದರೂ ಮತ್ತೊಮ್ಮೆ ಬಿಜೆಪಿ ವಿಜಯಪತಾಕೆ ಹಾರಿಸಿದ್ದು, ಕಾಂಗ್ರೆಸ್ ಗೆ ಸೋಲಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

 

ಇತ್ತೀಚಿನ ಸುದ್ದಿ