ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ಸಾವಿಗೆ ಶರಣು - Mahanayaka
4:09 PM Wednesday 22 - January 2025

ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ಸಾವಿಗೆ ಶರಣು

Trishal
10/01/2025

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ತುಮಕೂರು ನಗರದ ವಿಜಯನಗರದ 2 ಮುಖ್ಯ ರಸ್ತೆಯಲ್ಲಿ ನಡೆದಿದೆ.

ಸರ್ವೊದಯ ಸ್ಕೂಲ್ ನಲ್ಲಿ 7ನೇ ತರಗತಿ ಓದುತ್ತಿದ್ದ ತ್ರಿಶಾಲ್, ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ಡೇತ್ ನೋಟ್ ಬರೆದಿಟ್ಟಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

 

ಇತ್ತೀಚಿನ ಸುದ್ದಿ