10:55 PM Wednesday 15 - October 2025

ಬಿಜೆಪಿಯ ಸರಪಂಚ್ ನನ್ನು ಗುಂಡಿಟ್ಟು ಹತ್ಯೆ ಮಾಡಿದ ಉಗ್ರರು!

sarapanch
12/03/2022

ಶ್ರೀನಗರ: ಬಿಜೆಪಿ ಪಕ್ಷದ ಸ್ಥಳೀಯ ಪಂಚಾಯತ್ ಮುಖಂಡನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಇತ್ತೀಚೆಗಷ್ಟೇ ಶ್ರೀನಗರದ ಖಾನ್ ಮೋಹ್ ನಲ್ಲಿ ಸ್ಥಳೀಯ ಪಂಚಾಯತ್ ಮುಖಂಡ(ಸರಪಂಚ್)ನನ್ನು ಉಗ್ರಗಾಮಿಗಳು ಆತನ ಮನೆಯಲ್ಲಿಯೇ ಗುಂಡಿಟ್ಟು ಹತ್ಯೆ ಮಾಡಿದ್ದರು. ಇದೀಗ ಕುಲ್ಗಾಮ್ ನಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ.

ಉಗ್ರರ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಸರಪಂಚ್ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಈ ವರ್ಷ ಪಂಚಾಯತ್ ಸದಸ್ಯರ ಮೇಲೆ ಉಗ್ರರು ನಡೆಸಿರುವ ಮೂರನೇ ದಾಳಿ ಇದಾಗಿದೆ. ಪಂಚಾಯತ್ ಸದಸ್ಯರನ್ನು ರಕ್ಷಣೆ ಮಾಡುವಲ್ಲಿ ಜಮ್ಮು ಮತ್ತು ಕಾಶ್ಮೀರ ಆಡಳಿತ ವಿಫಲವಾಗಿದೆ ಎಂದು ರಾಜಕೀಯ ಪಕ್ಷಗಳು ಟೀಕಿಸಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೌದ್ಧ ಧರ್ಮದ ಅವಹೇಳನ ಆರೋಪ: ಸಚಿವ ಸುಧಾಕರ್ ವಿರುದ್ಧ ಪ್ರತಿಭಟನೆ

ಬಿಜೆಪಿಗೆ ಹೇಗೆ ಮತ ಗಳಿಸಬೇಕು ಎಂದು ಗೊತ್ತಿದೆ: ರಾಕೇಶ್ ಟೀಕಾಯತ್ ಹೇಳಿಕೆ

ಮಲ್ಪೆ ಸಮುದ್ರದಲ್ಲಿ ಬಲೆಗೆ ಬಿದ್ದ ಗರಗಸ ಮೀನು !

ಕಾಂಗ್ರೆಸ್ ಅವನತಿ ಆರಂಭ: ಸಂಸದ ಪ್ರತಾಪ್ ಸಿಂಹ

ದೇಶದ 2ನೇ ಅತೀ ದೊಡ್ಡ ಶ್ರೀಮಂತ ಪಕ್ಷ ಬಿಎಸ್ ಪಿಗೆ ಹೀನಾಯ ಸೋಲು | ಮಾಯಾವತಿಜಿ ಇದು ನ್ಯಾಯವೇ?

 

ಇತ್ತೀಚಿನ ಸುದ್ದಿ

Exit mobile version