ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಚ್ಚಿ ಕೊಲೆ

venkatesh
08/10/2025

ಕೊಪ್ಪಳ:  ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ  ನಡೆದಿದೆ.

ವೆಂಕಟೇಶ್(31) ಹತ್ಯೆಗೊಳಗಾಗಿರುವ ಬಿಜೆಪಿ ಮುಖಂಡರಾಗಿದ್ದು,  ಸ್ನೇಹಿತರ ಜೊತೆಗೆ ಊಟಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಏಳೆಂಟು ಜನರ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವೆಂಕಟೇಶ್ ಅವರನ್ನ ಹತ್ಯೆ ಮಾಡಿರುವುದಾಗಿ ಪ್ರತ್ಯಕ್ಷದರ್ಶಿ, ವೆಂಕಟೇಶ್ ಸ್ನೇಹಿತ ರಾಮು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ, ಶ್ವಾನದಳ ಹಾಗೂ ಬೆರಳಚ್ಚು ತಂಡದವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಹಳೆಯ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚಿನ ಮಾಹಿತಿಗಳು ತನಿಖೆಯ ನಂತರ ತಿಳಿಯಲಿದೆ ಎಂದು ಅರಸಿದ್ಧಿ ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version