12:39 PM Thursday 21 - August 2025

ಬಿಜೆಪಿಗೆ ಬಂದ 17 ಶಾಸಕರಿಗೆ ಬಿಗ್ ಶಾಕ್ ನೀಡಿದ ಮಾಜಿ ಸಿಎಂ ಯಡಿಯೂರಪ್ಪ!

yediyurappa
30/07/2021

ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್-ಜೆಡಿಎಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಬಾಂಬೆ ಫ್ರೆಂಡ್ಸ್ ಅನಾಥರಾಗಿದ್ದಾರೆ. ಬಿಎಸ್ ವೈನ್ನು ನಂಬಿ ಬಿಜೆಪಿಗೆ ಸೇರ್ಪಡೆಗೊಂಡಿದ್ದವರು ಇದೀಗ ಸಚಿವ ಸ್ಥಾನ ಕಳೆದುಕೊಂಡಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದಿಲ್ಲ ಎಂಬ ಅಭದ್ರತೆ ಇದೀಗ ಅವರನ್ನು ಕಾಡುತ್ತಿದೆ. ಈ ನಡುವೆ ಮಾಜಿ ಸಿಎಂ ಯಡಿಯೂರಪ್ಪ ಬಾಂಬೆ ಫ್ರೆಂಡ್ಸ್ ಗೆ ಮತ್ತೆ ಶಾಕ್ ನೀಡಿದ್ದಾರೆ.

ಸಚಿವ ಸಂಪುಟ ರಚನೆಯಲ್ಲಿ ನಾನು ಹಸ್ತಕ್ಷೇಪ ಮಾಡಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಬಿಡಬೇಕು ಎಂಬುದು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳುವ ಮೂಲಕ ಬಾಂಬೆ ಫ್ರೆಂಡ್ಸ್ ಗೆ ಶಾಕ್ ನೀಡಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಸಚಿವ ಸಂಪುಟ ರಚನೆಗಾಗಿ ನಾನು ಯಾವುದೇ ಸಲಹೆಗಳನ್ನು ಕೊಡಲ್ಲ. ಬಿಜೆಪಿಗೆ ಬಂದ 17 ಶಾಸಕರ ಬಗ್ಗೆಯೂ ನಾನು ಈಗ ಏನೂ ಹೇಳುವುದೂ ಇಲ್ಲ. ಅವರಿಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಸಿಎಂಗೆ ಬಿಟ್ಟ ನಿರ್ಧಾರ. ಸಂಪುಟ ರಚನೆಯಲ್ಲಿ ಬೊಮ್ಮಾಯಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಹಾಗಾಗಿ ಹೈಕಮಾಂಡ್ ಹಾಗೂ ಸಿಎಂ ಸೇರಿ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಇನ್ನಷ್ಟು ಸುದ್ದಿಗಳು…

ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ | ಕಾರ್ಯಾಚರಣೆಗೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗೂ ಗಂಭೀರ ಗಾಯ

ವಿಚ್ಛೇದನದ ಬಳಿಕ ಜೊತೆಯಾಗಿ ಒಂದೇ ಮನೆಯಲ್ಲಿ ವಾಸಿಸುತ್ತಿದ್ದ ಸಹೋದರಿಯರ ಬರ್ಬರ ಹತ್ಯೆ!

ನಡು ರಸ್ತೆಯಲ್ಲಿಯೇ ತಂಗಿಗೆ ಚಾಕುವಿನಿಂದ ಇರಿದು ಕೊಂದ ಅಣ್ಣಂದಿರು!

ಸೆಕ್ಸ್ ವಿಡಿಯೋ ತಯಾರಿಸುವುದು ಕೂಡ ಒಂದು ಉದ್ಯೋಗ | ಸಲ್ಮಾನ್ ಖಾನ್ ಮಾಜಿ ಪ್ರೇಯಸಿ ಸೋಮಿ ಅಲಿ

ಯಡಿಯೂರಪ್ಪಗೆ ವಯಸ್ಸಾಗಿಲ್ಲ, ಮದುವೆ ಮಾಡಿಸಿದ್ರೆ ಮಕ್ಕಳಾಗ್ತವೆ | ಸಿ.ಎಂ.ಇಬ್ರಾಹಿಂ

ಇತ್ತೀಚಿನ ಸುದ್ದಿ

Exit mobile version