‘ಲೋಕ’ ಟಿಕೆಟ್ ಸಿಕ್ಕರೂ ಬೇಡ ಎಂದ ಬಿಜೆಪಿ ಸಂಸದೆ: ಬಿಜೆಪಿ ನಾಯಕರು ಕನ್ ಫ್ಯೂಸ್..!

23/03/2024

ಗುಜರಾತ್‌ನ ವಡೋದರ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ಮುಂಬರುವ ಚುನಾವಣೆಗೆ ಟಿಕೆಟ್ ಪಡೆದುಕೊಂಡಿದ್ದ ರಂಜನ್ ಭಟ್, ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಅವರನ್ನು ವಡೋದರ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಸುವ ಬಿಜೆಪಿ ನಿರ್ಧಾರವನ್ನು ಪ್ರತಿಭಟಿಸಿ ನಗರದ ವಿವಿಧ ಭಾಗಗಳಲ್ಲಿ ಬ್ಯಾನರ್‌ಗಳು ಪ್ರತ್ಯಕ್ಷವಾಗಿದ್ದವು.

ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ನಾನು, ರಂಜನ್‌ಬೆನ್ ಧನಂಜಯ ಭಟ್, 2024ರ ಲೋಕಸಭಾ ಚುನಾವಣೆಗೆ ವೈಯಕ್ತಿಕ ಕಾರಣಗಳಿಂದಾಗಿ ಸ್ಪರ್ಧಿಸಲು ಇಚ್ಛಿಸುವುದಿಲ್ಲ’ ಎಂದು ಎಕ್ಸ್ ತಾಣದಲ್ಲಿ ಬರೆದುಕೊಂಡಿದ್ದಾರೆ. ‘ಭಟ್ ರನ್ನು ಮತ್ತೆ ಅಭ್ಯರ್ಥಿಯನ್ನಾಗಿ ಮಾಡುವುದಕ್ಕೆ ಕೆಲ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರನ್ನು ಉಮೇದುವಾರನನ್ನಾಗಿ ಘೋಷಣೆ ಮಾಡದ ಬಳಿಕ ಬಿಜೆಪಿ ಮಹಿಳಾ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷೆ ಜ್ಯೋತಿಬೆನ್ ಪಾಂಡ್ಯ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಡೋದರಾ ಹಾಗೂ ವಾರಾಣಸಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಬಳಿಕ ವಡೋದರಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರದಿಂದ ಭಟ್ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2019ರಲ್ಲೂ ಗೆದ್ದಿದ್ದರು. ಇದೀಗ ಮತ್ತೆ ಟಿಕೆಟ್ ಪಡೆದಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version