ಬಿಜೆಪಿಯವರು ಕರ್ನಾಟಕದಲ್ಲಿ ಸ್ವಂತ ಶಕ್ತಿಯಿಂದ ಗೆದ್ದು ಬಂದಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ - Mahanayaka
11:29 PM Wednesday 15 - October 2025

ಬಿಜೆಪಿಯವರು ಕರ್ನಾಟಕದಲ್ಲಿ ಸ್ವಂತ ಶಕ್ತಿಯಿಂದ ಗೆದ್ದು ಬಂದಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

siddaramaiha
20/03/2022

ಹುಬ್ಬಳ್ಳಿ: ಬಿಜೆಪಿಯವರು ಕರ್ನಾಟಕದಲ್ಲಿ ಸ್ವಂತ ಶಕ್ತಿ ಮೇಲೆ ಗೆದ್ದು ಬಂದಿಲ್ಲ. ಆಪರೇಷನ್ ಕಮಲ ಮಾಡಿಕೊಂಡು ಅಧಿಕಾರಕ್ಕೆ ಬಂದಿರುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.


Provided by

ಈ ಕುರಿತು ಮಾತನಡಿದ ಅವರು, ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷವಿದೆ, ಈಗಾಗಲೇ ತಯಾರಿ ನಡೆಯುತ್ತಿದೆ. ಪಂಚರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಗೆದ್ದಿರುವ ಬಿಜೆಪಿ ಕರ್ನಾಟಕದಲ್ಲಿ ಕೂಡ ಗೆಲ್ಲುತ್ತಾರೆ ಎಂಬ ಭ್ರಮೆಯಲ್ಲಿದ್ದಾರಷ್ಟೆ, ಇಲ್ಲಿಯ ಪರಿಸ್ಥಿತಿ ಬೇರೆಯಾಗಿದೆ ಎಂದರು.

ಮುಂದಿನ ಬಾರಿ ಸಮ್ಮಿಶ್ರ ಸರ್ಕಾರ ಅಲ್ಲ, ಕಾಂಗ್ರೆಸ್ ಮುಂಬರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಲಿದೆ. ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ತರುವ ವಿಚಾರ ಬಗ್ಗೆ ಮಾತನಾಡಿದ ಅವರು, ಗುಜರಾತ್‌ನವರು ತಂದಿರಬಹುದು, ರಾಜ್ಯದಲ್ಲಿ ತಂದಿದ್ದಾರೆಯೇ, ಇಲ್ಲದಿರುವ ವಿಚಾರಗಳ ಬಗ್ಗೆ ಏಕೆ ಕೇಳುತ್ತೀರಿ. ಮಕ್ಕಳಿಗೆ ನೈತಿಕ ಶಿಕ್ಷಣ ಬೇಕು ಜೊತೆಗೆ ಗುಣಮಟ್ಟದ ಶಿಕ್ಷಣ ಕೂಡ ಬೇಕು, ಈ ದೇಶದ ಭವಿಷ್ಯ ರೂಪಿಸುವವರು ಮಕ್ಕಳು, ಮಕ್ಕಳು ಸಶಕ್ತೀಕರಣಗೊಳ್ಳುವ ರೀತಿಯಲ್ಲಿ ಶಿಕ್ಷಣ ನೀಡಬೇಕು ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೂಲ್ಕಿ ಬಸ್ ನಿಲ್ದಾಣದಲ್ಲಿ ಕಾರ್ಕಳದ ವ್ಯಕ್ತಿಯ ಶವ ಪತ್ತೆ

ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಮಾಧುಸ್ವಾಮಿ

ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸುತ್ತೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ದಾಳಿ: ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ