ಲಿಂಗಾಯತರ ಕುರಿತು ಬಿಎಲ್ ಸಂತೋಷ್ ಹೇಳಿಕೆ ಸುಳ್ಳು

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಲಿಂಗಾಯತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿತ್ತು ಇದನ್ನು ನಿರಾಕರಿಸಿರುವ ಬಿಜೆಪಿ ಪತ್ರಿಕಾಪ್ರಕಟಣೆ ಹೊರಡಿಸಿದೆ.
ರಾಜ್ಯದಲ್ಲಿ ಪ್ರಭಾವಿ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್, ಅವಧಿಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ಅದಾದನಂತೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರರ ಬಗ್ಗೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಇತ್ತಿಚೆಗೆ ಪಂಚಮಸಾಲಿ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಿಲ್ಲ. ಅವರು ಬಿಜೆಪಿಯನ್ನೇ ತೊರೆದು ಕಾಂಗ್ರೆಸ್ ಸೇರಿಕೊಂಡರು. ಈ ಎಲ್ಲ ಬೆಳವಣಿಗೆಯ ಮಧ್ಯೆ ಇದೀಗ ಬಿಎಲ್ ಸಂತೋಷ್ ಅವರು ಲಿಂಗಾಯತ ನಾಯಕರು ಹಾಗೂ ಆ ಸಮುದಾಯದವರ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿಯ ಪೇಪರ್ ಕಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸತ್ಯವಾದ ಸುದ್ದಿಯೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಗೊಂದಲಗಳಿದ್ದು, ಈ ಸುದ್ದಿಯ ಮೂಲ ಯಾವುದು ಎಂಬ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ.
ಸುಳ್ಳು ಸುದ್ದಿ ಪೋಸ್ಟ್ ಮಾಡಲಾಗಿದೆ. ಈ ರೀತಿ ಹೇಳಿಕೆಯನ್ನು ಸಂತೋಷ್ ಅವರು ಎಂದಿಗೂ ಹೇಳಿರುವುದಿಲ್ಲ ಎಂದು ಅಧಿಕೃತವಾಗಿ ಧೃಢೀಕರಿಸಿದ್ದಾರೆ. ಅಪಪ್ರಚಾರಕ್ಕಾಗಿ ಸುಳ್ಳು ಸುದ್ದಿ ಹರಿಬಿಡಲಾಗಿದೆ ಎಂದು ಸ್ಪಷ್ಟನೆ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw