ಲಿಂಗಾಯತರ ಅಗತ್ಯವಿಲ್ಲ: ಬಜರಂಗಿ ಫೈಟ್ ನಡುವೆ ಬಿ.ಎಲ್.ಸಂತೋಷ್ ಹೇಳಿಕೆ ವೈರಲ್ - Mahanayaka
3:41 PM Wednesday 15 - October 2025

ಲಿಂಗಾಯತರ ಅಗತ್ಯವಿಲ್ಲ: ಬಜರಂಗಿ ಫೈಟ್ ನಡುವೆ ಬಿ.ಎಲ್.ಸಂತೋಷ್ ಹೇಳಿಕೆ ವೈರಲ್

b l santhosh
05/05/2023

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎನ್ನುವ ಚರ್ಚೆ ಹುಟ್ಟುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್, ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಲಿಂಗಾಯತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.


Provided by

ರಾಜ್ಯದಲ್ಲಿ ಪ್ರಭಾವಿ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್, ಅವಧಿಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ಅದಾದನಂತೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರರ ಬಗ್ಗೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇತ್ತಿಚೆಗೆ ಪಂಚಮಸಾಲಿ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಿಲ್ಲ. ಅವರು ಬಿಜೆಪಿಯನ್ನೇ ತೊರೆದು ಕಾಂಗ್ರೆಸ್ ಸೇರಿಕೊಂಡರು. ಈ ಎಲ್ಲ ಬೆಳವಣಿಗೆಯ ಮಧ್ಯೆ ಇದೀಗ ಬಿ.ಎಲ್.ಸಂತೋಷ್ ಅವರು ಲಿಂಗಾಯತ ನಾಯಕರು ಹಾಗೂ ಆ ಸಮುದಾಯದವರ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿಯ ಪೇಪರ್ ಕಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸತ್ಯವಾದ ಸುದ್ದಿಯೋ ಅಥವಾ ಸುಳ್ಳೋ ಎನ್ನುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ