ಟಿವಿ ಜ್ಯೋತಿಷಿ ಆನಂದ್ ಗುರೂಜಿಗೆ 'ವಿಡಿಯೋ ಇದೆ' ಎಂದು ಬ್ಲ್ಯಾಕ್ ಮೇಲ್: ಖುಷಿ ಸುದ್ದಿ ದಿವ್ಯಾ ವಸಂತ ಸೇರಿದಂತೆ ಇಬ್ಬರ ವಿರುದ್ಧ ದೂರು - Mahanayaka

ಟಿವಿ ಜ್ಯೋತಿಷಿ ಆನಂದ್ ಗುರೂಜಿಗೆ ‘ವಿಡಿಯೋ ಇದೆ’ ಎಂದು ಬ್ಲ್ಯಾಕ್ ಮೇಲ್: ಖುಷಿ ಸುದ್ದಿ ದಿವ್ಯಾ ವಸಂತ ಸೇರಿದಂತೆ ಇಬ್ಬರ ವಿರುದ್ಧ ದೂರು

anand guruji
15/05/2025

ಬೆಂಗಳೂರು: ಕಾರು ಅಡ್ಡಗಟ್ಟಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ, ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಖುಷಿ ಸುದ್ದಿ ದಿವ್ಯಾ ವಸಂತ ಸೇರಿದಂತೆ ಇಬ್ಬರ ವಿರುದ್ಧ ಟಿವಿ ಜ್ಯೋತಿಷಿ ಆನಂದ್ ಗುರೂಜಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ.

ಆನಂದ್ ಗುರೂಜಿ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣ ಸಂಬಂಧ ಕೋರ್ಟ್ ನಿಂದ ತಡೆಯಾಜ್ಞೆ ತರಲಾಗಿದೆ. ಆದರೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವ ಬೆದರಿಕೆ ಹಾಕಲಾಗಿದೆ ಎಂದು ಕೃಷ್ಣಮೂರ್ತಿ(A1) ಹಾಗೂ ದಿವ್ಯಾ ವಸಂತ(A2)  ವಿರುದ್ಧ ಆನಂದ್ ಗುರೂಜಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ವಿಡಿಯೋ ಇರುವುದಾಗಿ ಆನಂದ್ ಗುರೂಜಿಗೆ ಪ್ರತಿನಿತ್ಯ ಆರೋಪಿಗಳು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಕೋರ್ಟ್ ನಿಂದ ತಡೆಯಾಜ್ಞೆ ತಂದರೂ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ. ಕಾರನ್ನು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ ಅಶ್ಲೀಲ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಬಿಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಹಲವಾರು ಯೂಟ್ಯೂಬ್ ಚಾನೆಲ್ ಗಳಲ್ಲಿ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಒಟ್ಟಿನಲ್ಲಿ ಜನರ ಗ್ರಹಗತಿಗಳನ್ನು ಸರಿಪಡಿಸುತ್ತೇವೆ ಎಂದು ಚಾನೆಲ್ ಗಳಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಹೇಳುವ ಗುರೂಜಿಗೆ ಇದೀಗ ಸಮಸ್ಯೆಯಾಗಿರುವುದು ಅಚ್ಚರಿ ಸೃಷ್ಟಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ