7:41 AM Thursday 29 - January 2026

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ: ಇಬ್ಬರು ಮಹಿಳೆಯರಿಗೆ ಗಾಯ

karkala
08/05/2024

ಉಡುಪಿ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ನಡೆದಿದೆ.

ಈ ಸುಡುಮದ್ದು ಘಟಕ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಇಂದು ಬೆಳಗ್ಗೆ ಸುಡುಮದ್ದು ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

3 ಕಟ್ಟಡಗಳಲ್ಲಿ ಸುಡುಮದ್ದು ತಯಾರಿಸಲಾಗುತ್ತಿದೆ. ಈ ಪೈಕಿ ಒಂದು ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ.  ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಗಾಯಗೊಂಡಿದೆ. ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದೆ.  ಸದ್ಯ ಗಾಯಾಳು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version