ನೀಲಿ ಶಾಲು, ಅಂಬೇಡ್ಕರ್ ವಿರುದ್ಧ ಕಿಡಿಗೇಡಿಯಿಂದ ಅವಹೇಳನಾಕಾರಿ ಬರಹ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಆಕ್ರೋಶ

praveen maddadka
22/03/2024

ಸುಳ್ಯ: ಪ್ರವೀಣ್ ಮದ್ದಡ್ಕ(Praveen Maddadka) ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಅಂಬೇಡ್ಕರ್ ಅವರ ನೀಲಿ ಶಾಲು ಹಾಗೂ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಾಕಾರಿ ಬರಹ ಬರೆದು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಲಾಗುತ್ತಿದ್ದು, ಇದು ಖಂಡಿನೀಯ ಎಂದು  ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಹಾನಾಯಕ ಜೊತೆಗೆ ಮಾತನಾಡಿದ ಅವರು, ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡುವುದು, ದಲಿತ ಜನಾಂಗವನ್ನು ಶೋಷಣೆ ಮಾಡುವ ಕೃತ್ಯಗಳು ನಿರಂತರವಾಗಿ ನಡೆಯುತ್ತಿತ್ತು. ಇದೀಗ ನೀಲು ಶಾಲು ಹಾಕುವುದನ್ನೂ  ವಿರೋಧಿಸಲು ಕಿಡಿಗೇಡಿಗಳು ಆರಂಭಿಸಿದ್ದಾರೆ. ಇಂತಹವರು ಅಂಬೇಡ್ಕರ್ ಅವರು ಬರೆದ ಸಂವಿಧಾನದಡಿಯಲ್ಲೇ ಜೀವನ ನಡೆಸುತ್ತಿದ್ದಾರೆ ಎನ್ನುವುದನ್ನು ಮರೆತಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

chandrashekhar
ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕೆ.ಪಲ್ಲತಡ್ಕ

ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಹೇಳಿಕೆಯನ್ನು ನೀಡಿರುವ  ಪ್ರವೀಣ್ ಮದ್ದಡ್ಕ ಎಂಬಾತನನ್ನು ತಕ್ಷಣವೇ ಪೊಲೀಸರು ಬಂಧಿಸಿ, ಕಾನೂನು ಕ್ರಮಕೈಗೊಳ್ಳಬೇಕು. ಲೋಕಸಭಾ ಚುನಾವಣೆಗೆ ಒಂದೆಡೆ ಸಿದ್ಧತೆಗಳು ನಡೆಯುತ್ತಿದೆ. ನೀತಿ ಸಂಹಿತೆ ಕೂಡ ಜಾರಿಯಲ್ಲಿದೆ ಇಂತಹ ಸಂದರ್ಭದಲ್ಲಿ ಈ ವ್ಯಕ್ತಿ ಸಮಾಜದಲ್ಲಿ ಅಶಾಂತಿ ಸೃಷ್ಟಿರುವ ಪ್ರಯತ್ನ ಮಾಡುತ್ತಿದ್ದು, ಪೊಲೀಸರು ತಕ್ಷಣವೇ ಇಂತಹವರ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತಡ್ಕ ಒತ್ತಾಯಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version