ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್: ಮೂರು ವರ್ಷದ ಮಗು ಸ್ಥಳದಲ್ಲೇ ಸಾವು

ayan
09/10/2023

ಬೆಂಗಳೂರು: ಬೈಕ್‌ ಗೆ ಹಿಂಬದಿಯಿಂದ ಬಿಎಂಟಿಸಿ  ಬಸ್ ಡಿಕ್ಕಿ ಹೊಡದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ ನಲ್ಲಿ ನಡೆದಿದೆ.

ಅಯಾನ್ (3) ಮೃತಪಟ್ಟ ಮಗು. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ. ಮಗು ದೊಡ್ಡಮ್ಮನ ಜೊತೆ ವಾಸವಾಗಿತ್ತು. ಭಾನುವಾರ ಬೈಕ್‌ ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಹಿಂಬದಿಯಿಂದ ಬೈಕ್‌ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ.

ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗಡೆ ಬಿದ್ದಿದೆ.ಮಗು ಕೆಳಗಡೆ ಬೀಳುತ್ತಿದ್ದಂತೆ ಬಿಎಂಟಿಸ್ ಬಸ್ಸಿನ ಚಕ್ರ ಮಗುವಿನ ಮೇಲೆ ಹರಿದಿದೆ. ಘಟನೆಯಿಂದ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಮೃತಪಟ್ಟಿದೆ.  ಬಿಎಂಟಿಸಿ ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು,ಈ ಸಂಬಂಧ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

Exit mobile version