ಇಬ್ಬರು ಬಲಿ: ಬಿಎಂಟಿಸಿ ಬಸ್  ಡಿಕ್ಕಿ ಹೊಡೆದು ಮಹಿಳೆ ಸಹಿತ ಇಬ್ಬರು ಬಲಿ - Mahanayaka
2:24 AM Saturday 25 - October 2025

ಇಬ್ಬರು ಬಲಿ: ಬಿಎಂಟಿಸಿ ಬಸ್  ಡಿಕ್ಕಿ ಹೊಡೆದು ಮಹಿಳೆ ಸಹಿತ ಇಬ್ಬರು ಬಲಿ

bmtc
29/10/2023

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಿಎಂಟಿಸಿಗೆ ಬೆಳ್ಳಂಬೆಳಿಗ್ಗೆ ಇಬ್ಬರು ಬಲಿಯಾಗಿದ್ದಾರೆ.

ರಸ್ತೆ ದಾಟುವ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೀಣಾ ಬಿಎಂಟಿಸಿ ಬಸ್‌ಗೆ ಬಲಿಯಾದ ಮಹಿಳೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ವಿಜಯನಗರ (Vijayanagara) ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ವ್ಯಕ್ತಿ ಬಿಎಂಟಿಸಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕುಮಾರ್ (45) ಬಿಎಂಟಿಸಿ ಬಸ್‌ಗೆ ಬಲಿಯಾದ ಬೈಕ್ ಸವಾರ. ವಿಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗೋವಿಂದರಾಜನಗರ ಬೈಟು ಕಾಫಿ ಮುಂಭಾಗದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ