8:46 PM Thursday 16 - October 2025

ಬೋಟ್ ದುರಂತ: ಇಬ್ಬರು ಅಪ್ರಾಪ್ತರು ನಾಪತ್ತೆ, 10 ಮಂದಿ ರಕ್ಷಣೆ

bot
29/01/2022

ಮಧ್ಯಪ್ರದೇಶ: ನದಿಯಲ್ಲಿ ಬೋಟ್‌ ಮಗುಚಿ ಹದಿಹರೆಯದ ಹುಡುಗ ಮತ್ತು ಹುಡುಗಿ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಸಿಂಧ್ ನದಿಯಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೋಟ್​​ ನಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದು, ಕೆಲವರು ಈಜಿಕೊಂಡು ದಡ ಸೇರಿದರೆ, ಮತ್ತೆ ಕೆಲವರನ್ನು ರಕ್ಷಿಸಲಾಗಿದೆ. ಆದರೆ ದ್ರೌಪದಿ ಬಾಘೆಲ್ (16) ಮತ್ತು ಓಂ ಬಾಘೆಲ್ (13) ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಿಂಧ್ ನದಿಯ ಮತ್ತೊಂದು ದಡದಲ್ಲಿರುವ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಮುಗಿಸಿಕೊಂಡು ವಾಪಸ್​​ ಆಗುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ನಾಯಾಗಾಂವ್ ಪೊಲೀಸ್ ಠಾಣೆಯ ಅಧಿಕಾರಿ ನರೇಂದ್ರ ಸಿಂಗ್ ಕುಶ್ವಾಹಾ ಮಾಹಿತಿ ನೀಡಿದ್ದಾರೆ. ನಾಪತ್ತೆಯಾದವರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತ್ನಿಯ ಅನುಮಾನಾಸ್ಪದ ಸಾವು: ಇಡೀ ರಾತ್ರಿ ಮೃತದೇಹದೊಂದಿಗೆ ಕಾಲ ಕಳೆದ ಪತಿ

ದೇಶದಲ್ಲೇ ಬಿ ಎಸ್ಪಿ ಎರಡನೇ ಶ್ರೀಮಂತ ಪಕ್ಷ, ಮೊದಲ ಸ್ಥಾನದಲ್ಲಿ ಬಿಜೆಪಿ

ಬೈಕ್‌ ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಸಮುದ್ರಕ್ಕೆ ಹಾರಿ ಯುವತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಲು ಹೋದ ಸ್ನೇಹಿತನೇ ಸಮುದ್ರಪಾಲು

ಅಲೆಮಾರಿ ಸಮುದಾಯದ ವ್ಯಕ್ತಿಗೆ ಬೆದರಿಕೆ: ತಹಶೀಲ್ದಾರ್ ವಿರುದ್ಧ ಎಫ್ ​ಐ ಆರ್​ ದಾಖಲು

 

ಇತ್ತೀಚಿನ ಸುದ್ದಿ

Exit mobile version