ಕೇರಳ ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಕಾರ್ಯಕರ್ತರ ಶವವಾಗಿ ಪತ್ತೆ! - Mahanayaka

ಕೇರಳ ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಕಾರ್ಯಕರ್ತರ ಶವವಾಗಿ ಪತ್ತೆ!

geresh babu
18/09/2023


Provided by

ಕೊಚ್ಚಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ದ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಬಾಬು ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲೇ ಶವವಾಗಿ ಪತ್ತೆಯಾಗಿದ್ದಾರೆ.

ಕಲಮಶ್ಶೇರಿಯಲ್ಲಿರುವ ತನ್ನ ಮನೆಯಲ್ಲಿ ಗಿರೀಶ್ ಬಾಬು ಮೃತದೇಹ ಪತ್ತೆಯಾಗಿದೆ. ಗಿರೀಶ್ ಅವರು ಆರೋಗ್ಯ ಸಂಬಂಧಿ ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅದನ್ನು ಅವರು ಕಳೆದ ತಿಂಗಳು ಫೇಸ್ ಬುಕ್ ಪೋಸ್ಟ್ ಮೂಲಕ ಪ್ರಕಟಿಸಿದರು. ಇನ್ನು ಪೊಲೀಸರು ಗಿರೀಶ್ ಮನೆಗೆ ಆಗಮಿಸಿ ವಿಚಾರಣೆ ಆರಂಭಿಸಿದ್ದಾರೆ.

ಗಿರೀಶ್ ಅವರು ಸಲ್ಲಿಸಿರುವ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೇರಳದಲ್ಲಿ ರಾಜಕೀಯ ಸಂಚಲನ ಮೂಡಿಸಿದ್ದವು. ಪಲರಿವಟ್ಟಂ ಫ್ಲೈಓವರ್ ಹಗರಣ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ವಿರುದ್ಧದ ‘ಮಾಸಿಕ ಪಾವತಿ’ ಆರೋಪಗಳು ಸೇರಿದಂತೆ ಪ್ರಕರಣಗಳು ಇತ್ತೀಚೆಗೆ ಭಾರೀ ಸದ್ದು ಮಾಡಿದ್ದವು.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗಿರೀಶ್ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರ ಕಾರಣ ಏನು ಎನ್ನುವ ಅಂತಿಮ ತೀರ್ಮಾನ ಸಿಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ