1:55 AM Thursday 18 - December 2025

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದದ್ದು ಬಾಂಬ್ ಸ್ಫೋಟ: ಸಂಸದ ತೇಜಸ್ವಿ ಸೂರ್ಯ

tejashasvi surya
01/03/2024

ಬೆಂಗಳೂರು: ಕುಂದನಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವುದು ಯಾವುದೇ ಸಿಲಿಂಡರ್ ಸ್ಫೋಟವಲ್ಲ, ಇದೊಂದು ಬಾಂಬ್ ಸ್ಫೋಟ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ರಾಮೇಶ್ವರಂ ಕೆಫೆ ಮಾಲಿಕ ನಾಗರಾಜ್ ಜೊತೆಗೆ ಈ ಘಟನೆಯ ಬಗ್ಗೆ ಮಾತನಾಡಿದೆ. ಗ್ರಾಹಕರೊಬ್ಬರು ಬಿಟ್ಟು ಹೋದ ಬ್ಯಾಗ್ ನಿಂದ ಸ್ಫೋಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೆಫೆಯಲ್ಲಿ ಯಾವುದೇ ಸಿಲಿಂಡರ್ ಸ್ಫೋಟವಾಗಿಲ್ಲ, ಘಟನೆಯಲ್ಲಿ ರಾಮೇಶ್ವರಂ ಕೆಫೆಯ ಸಿಬ್ಬಂದಿ ಗಾಯಗೊಂಡಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿರುವುದು ಬಾಂಬ್ ಸ್ಫೋಟ ಅನ್ನೋದು ಮೇಲ್ನೋಟಕ್ಕೆ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿಗರಿಗೆ ಉತ್ತರ ಕೊಡಬೇಕು ಎಂದು ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version