10:26 AM Saturday 23 - August 2025

4 ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳನ್ನು ಮನೆಗೆ ಕಳುಹಿಸಿದ ಅಧಿಕಾರಿಗಳು

13/05/2024

ವಿಮಾನ ನಿಲ್ದಾಣ ಮತ್ತು ಆಸ್ಪತ್ರೆಗಳ ಮೇಲೆ ಬಾಂಬ್ ದಾಳಿ ನಡೆಸುವ ಬೆದರಿಕೆಗಳಿಂದ ರಾಜಸ್ಥಾನದ ಜೈಪುರವು ಬೆಚ್ಚಿಬಿದ್ದ ಒಂದು ದಿನದ ನಂತರ, ಪಿಂಕ್ ಸಿಟಿಯ ಕನಿಷ್ಠ ನಾಲ್ಕು ಶಾಲೆಗಳಿಗೆ ಸೋಮವಾರ ಬೆದರಿಕೆ ಇಮೇಲ್ ಗಳು ಬಂದಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶಾಲಾ ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಿದರು. ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಸ್ನಿಫರ್ ಶ್ವಾನಗಳೊಂದಿಗೆ ಪೊಲೀಸ್ ತಂಡಗಳು ತಕ್ಷಣ ಸ್ಥಳಕ್ಕೆ ಬಂದವು.

ಮಹೇಶ್ವರಿ ಶಾಲೆ (ಎಂಪಿಎಸ್ ಇಂಟರ್ನ್ಯಾಷನಲ್ ಸ್ಕೂಲ್) ಸೇರಿದಂತೆ ನಗರದ ಕೆಲವು ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿದೆ ಎಂದು ಪೂರ್ವ ಜೈಪುರದ ಡಿಸಿಪಿ ಕವೇಂದ್ರ ಸಾಗರ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ. ಪ್ರಸ್ತುತ, ಬಾಂಬ್ ನಿಷ್ಕ್ರಿಯ ದಳವು ಶಾಲೆಯಲ್ಲಿ ಶೋಧ ನಡೆಸುತ್ತಿದೆ.

ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ಕಳುಹಿಸುವವರನ್ನು ಗುರುತಿಸಲು ತಂಡ ಪ್ರಯತ್ನಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version