ಬೆಂಗಳೂರಿನ ITBT ಕಂಪನಿಗೆ ಬಾಂಬ್ ಬೆದರಿಕೆ ಕರೆ

banglore 1
13/06/2023

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಟಿತ ಬೆಂಗಳೂರಿನ ಇಕೋ ಸ್ಪೇಸ್ ನ IBDO ಅನ್ನೋ ಕಂಪನಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಕರೆ ಬಂದಿದ್ದು ಆತಂಕ ಸೃಷ್ಟಿಸಿದೆ.

ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದು, ನಿಮ್ಮ ಕಂಪನಿಯಲ್ಲಿ ಬಾಂಬ್ ಇಟ್ಟಿದ್ದೀವಿ, ಸ್ವಲ್ಪ ಸಮಯದಲ್ಲೇ ಬ್ಲಾಸ್ಟ್ ಆಗುವುದಾಗಿ ಹೇಳಲಾಗಿದೆ.

ಕಂಪನಿಯಿಂದ ಸ್ಥಳೀಯ ಪೊಲೀಸರಿಗೆ (Police) ಮಾಹಿತಿ ನೀಡಲಾಗಿದೆ. ಬೆಳ್ಳಂದೂರು ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ISD ಅಧಿಕಾರಿಗಳ ತಂಡವೂ ಸ್ಥಳಕ್ಕೆ ಧಾವಿಸಿದ್ದು, ತಪಾಸಣೆ ನಡೆಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version