ಚಿಕ್ಕಮಗಳೂರು: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೈ ಅಲರ್ಟ್, ತೀವ್ರ ಶೋಧ!

police
02/07/2026

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದು ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಗರದ ಹೃದಯ ಭಾಗದಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಇ–ಮೇಲ್ ಸಂದೇಶ ಬಂದಿದ್ದು, ಇಡೀ ಕೋರ್ಟ್ ಆವರಣದಲ್ಲಿ ಆತಂಕ ಮೂಡಿಸಿದೆ.

ನ್ಯಾಯಾಲಯದ ಅಧಿಕೃತ ಇ-ಮೇಲ್‌ಗೆ ಬಂದಿರುವ ಸಂದೇಶದಲ್ಲಿ, “ಮಧ್ಯಾಹ್ನ 1.30ರಿಂದ 3.30ರ ಒಳಗೆ ಕೋರ್ಟ್‌ನಲ್ಲಿ ಬಾಂಬ್ ಬ್ಲಾಸ್ಟ್ ಮಾಡ್ತೀವಿ” ಎಂದು ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ನ್ಯಾಯಾಲಯದ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಲಾಪದ ಮಧ್ಯೆಯೇ ಶ್ವಾನದಳ, ಬಾಂಬ್ ಸ್ಕ್ವಾಡ್ ಎಂಟ್ರಿ

ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಅಲರ್ಟ್ ಆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ನ್ಯಾಯಾಲಯದ ದೈನಂದಿನ ಕಲಾಪಗಳು ನಡೆಯುತ್ತಿದ್ದ ವೇಳೆಯಲ್ಲೇ ಕೋರ್ಟ್ ಆವರಣಕ್ಕೆ ಪ್ರವೇಶಿಸಿದ ಪೊಲೀಸ್ ಪಡೆ, ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದೆ.

ಬಾಂಬ್ ನಿಷ್ಕ್ರಿಯ ದಳ (Bomb Squad) ಮತ್ತು ಶ್ವೇನ ದಳ (Dog Squad) ದೊಂದಿಗೆ ಪೊಲೀಸರು ಇಡೀ ನ್ಯಾಯಾಲಯದ ಮೂಲೆ ಮೂಲೆಗಳನ್ನು ಜಾಲಾಡುತ್ತಿದ್ದಾರೆ.

ನ್ಯಾಯಾಲಯದ ಕೊಠಡಿಗಳು, ಕಾರಿಡಾರ್ ಹಾಗೂ ವಾಹನ ನಿಲ್ದಾಣ ಸೇರಿದಂತೆ ಸಂಪೂರ್ಣ ಆವರಣದಲ್ಲಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.

ಚಿಕ್ಕಮಗಳೂರಿನ ಅತ್ಯಂತ ಜನನಿಬಿಡ ಹಾಗೂ ಪ್ರಮುಖ ಭಾಗದಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಈ ರೀತಿಯ ಬೆದರಿಕೆ ಬಂದಿರುವುದು ವಕೀಲರು, ಕಕ್ಷಿದಾರರು ಹಾಗೂ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ. ಸದ್ಯಕ್ಕೆ ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version