ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬಾಂಬೆ ಮೀಠಾಯಿ ಬ್ಯಾನ್ ಸಾಧ್ಯತೆ!

ಕಾಟನ್ ಕ್ಯಾಂಡಿ ಅಥವಾ ಬಾಂಬೆ ಮೀಠಾಯಿ ದೊಡ್ಡವರಿಂದ ಸಣ್ಣವರವರೆಗೂ ಎಲ್ಲರೂ ಇಷ್ಟ ಪಡುತ್ತಾರೆ. ಆದ್ರೆ ಇದೀಗ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ರಾಜ್ಯಗಳು ಕಾಟನ್ ಕ್ಯಾಂಡಿ ನಿಷೇಧಕ್ಕೆ ಮುಂದಾಗಿವೆ.
ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಉಂಟುಮಾಡುವ ರೋಡಮೈನ್-ಬಿ ಎಂಬ ಬಣ್ಣ ಪತ್ತೆಯಾದ ನಂತರ ಪುದುಚೇರಿ ಮತ್ತು ತಮಿಳುನಾಡು ಸರ್ಕಾರಗಳು ಕಾಟನ್ ಕ್ಯಾಂಡಿ ಉತ್ಪಾದನೆ ಮತ್ತು ಮಾರಾಟವನ್ನು ನಿಷೇಧಿಸಲು ಮುಂದಾಗಿವೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರ ಕೂಡ ಕಾಟನ್ ಕ್ಯಾಂಡಿಯ ಮಾದರಿಗಳನ್ನು ಸಂಗ್ರಹಿಸಲು ಆರಂಭಿಸಿದ್ದು, ಕರ್ನಾಟಕದಲ್ಲೂ ಕಾಟನ್ ಕ್ಯಾಂಡಿ ನಿಷೇಧವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಮಕ್ಕಳಲ್ಲಿ ಜನಪ್ರಿಯವಾಗಿ ಬಾಂಬೆ ಮಿಠಾಯಿ ಎಂದು ಕರೆಸಿಕೊಳ್ಳುವ ಕಾಟನ್ ಕ್ಯಾಂಡಿ “ಅತ್ಯಂತ ಹಾನಿಕಾರಕ” ಎಂದು ಗುರುತಿಸಲಾಗಿದೆ. ತಮಿಳುನಾಡಿನ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿ ರೋಡಮೈನ್-ಬಿ ಇರುವಿಕೆಯನ್ನು ದೃಢಪಟ್ಟಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಕ್ಯಾಟನ್ ಕ್ಯಾಂಡಿ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ.