ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ | ಇದೇನಾ ದಮ್ಮು, ತಾಕತ್ತು? ಎಂದು ಪ್ರಶ್ನಿಸಿದ ಕಾಂಗ್ರೆಸ್ - Mahanayaka
12:42 PM Tuesday 4 - November 2025

ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ | ಇದೇನಾ ದಮ್ಮು, ತಾಕತ್ತು? ಎಂದು ಪ್ರಶ್ನಿಸಿದ ಕಾಂಗ್ರೆಸ್

basavaraj bomayi
28/08/2024

ಬೆಂಗಳೂರು: ತನ್ನ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಕೋರ್ಟ್ ಮೆಟ್ಟಿಲೇರಿ ಅಚ್ಚರಿ ಸೃಷ್ಟಿಸಿದ್ದಾರೆ.

ನಗರದ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬೊಮ್ಮಾಯಿ ಅರ್ಜಿ ಸಲ್ಲಿಸಿದ್ದರು. ಇದಲ್ಲದೇ ವಕೀಲ ಜಗದೀಶ್ ಮಹದೇವ್ ವಿರುದ್ಧವೂ ನಿರ್ಬಂಧಕಾಜ್ಞೆ ಹೇರುವಂತೆ ಅರ್ಜಿಯಲ್ಲಿ ಅವರು ಕೋರಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಿಜೆಪಿ ನಾಯಕರನ್ನು ತರಾಟೆಗೆತ್ತಿಕೊಂಡಿದ್ದು, ದಮ್ಮು ತಾಕತ್ತಿನ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಕ್ಯೂ ನಿಂತು ತಡೆಯಾಜ್ಞೆ ತರುತ್ತಿರುವುದೇಕೆ? ಎಂದು ಪ್ರಶ್ನಿಸಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೂ ಕೂಡ ತಮಗೆ ಸಂಬಂಧಿಸಿದ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತರಲು ಕೋರ್ಟ್ ಮೆಟ್ಟಿಲೇರಿದ ಸುದ್ದಿ ಬಂದಿದೆ, ಬೊಮ್ಮಾಯಿಯವರಿಗೆ ಕಾಡುತ್ತಿರುವ ಭೀತಿಯಾದರೂ ಯಾವುದು? ಅಂತ ಪ್ರಶ್ನಿಸಿದೆ.
ಈ ಭೀತಿಗೆ ಕಾರಣವಾಗುವಂತಹ ಯಾವ ಘನಂದಾರಿ ಕೆಲಸ ಮಾಡಿದ್ದಾರೆ? ಕೆ. ಸುಧಾಕರ್ ಅವರು “ಯಾರೂ ಏಕಪತ್ನಿ ವ್ರತಸ್ಥರಲ್ಲ“ ಎಂದಿದ್ದಕ್ಕೂ ಈ ತಡೆಯಾಜ್ಞೆಗೂ ಸಂಬಂಧವಿದೆಯೇ? ಅಂತ ಕಾಂಗ್ರೆಸ್ ಪ್ರಶ್ನಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ