ಬೋರ್ ವೇಲ್ ನೊಳಗೆ ಬಿದ್ದಿದ್ದ ಎರಡೂವರೆ ವರ್ಷದ ಮಗು ದಾರುಣ ಸಾವು! - Mahanayaka

ಬೋರ್ ವೇಲ್ ನೊಳಗೆ ಬಿದ್ದಿದ್ದ ಎರಡೂವರೆ ವರ್ಷದ ಮಗು ದಾರುಣ ಸಾವು!

belagavi
18/09/2021

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ ವೆಲ್ ನೊಳಗೆ ಬಿದ್ದಿದ್ದ ಮಗು ಮೃತಪಟ್ಟಿದೆ ಎನ್ನುವ ಮಾಹಿತಿ ದೊರೆತಿದ್ದು, ಬೆಳಗಾವಿ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ನಿನ್ನೆ ಸಂಜೆಯಿಂದಲೇ ನಾಪತ್ತೆಯಾಗಿದ್ದ ಶರತ್ ಎಂಬ ಎರಡೂವರೆ ವರ್ಷದ ಮಗು ಬೋರ್ವೆಲ್ ನಲ್ಲಿಯೇ ಮೃತಪಟ್ಟಿದೆ. ಬಾಲಕ ನಾಪತ್ತೆಯಾದ ಹಿನ್ನೆಲೆಯಲ್ಲಿ ಪೋಷಕರು ಬಾಲಕನನ್ನು ಅಪಹರಿಸಲಾಗಿದೆ ಎಂದು ದೂರು ದಾಖಲಿಸಿದ್ದರು. ಆದರೆ ಮಗುವಿನ ಪೋಷಕರು ವಾಸವಿದ್ದ ತೋಟದ ಮನೆಯಲ್ಲಿಯೇ 200 ಮೀಟರ್ ದೂರದಲ್ಲಿದ್ದ ನೀರಿಲ್ಲದ ಬೋರ್ವೆಲ್ ನೊಳಗೆ ಮಗು ಬಿದ್ದಿತ್ತು.

ಬೋರ್ ವೇಲ್ ನೊಳಗೆ ಬಿದ್ದಿದ್ದ ಮಗು ಕೂಗಾಡುವ ಸದ್ದು ಕೂಡ ಕೇಳುತ್ತಿರಲಿಲ್ಲ. ಪರಿಶೀಲನೆ ನಡೆಸಿದಾಗ ಮಗು ಮೃತಪಟ್ಟಿರುವುದು ತಿಳಿದು ಬಂದಿದೆ. ಆರು ತಿಂಗಳ ಹಿಂದೆಯಷ್ಟೇ ಈ ಜಮೀನಿನಲ್ಲಿ ಬೋರ್ ವೇಲ್ ಕೊರೆಸಲಾಗಿತ್ತು. ಆದರೆ, ನೀರು ಸಿಗದ ಕಾರಣ ಬೋರ್ ವೇಲ್ ನ್ನು ಮುಚ್ಚದೇ ಹಾಗೆ ಬಿಡಲಾಗಿತ್ತು. ಇದರಿಂದಾಗಿ ಈ ದುರಂತ ಸಂಭವಿಸಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.

ಇನ್ನಷ್ಟು ಸುದ್ದಿಗಳು…

ಬಿಗ್ ಬ್ರೇಕಿಂಗ್ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಬೋರ್ ವೇಲ್ ದುರಂತ

ಮಗಳನ್ನು ಚುಡಾಯಿಸಬೇಡ ಎಂದಿದ್ದಕ್ಕೆ ಬಾಲಕಿಯ ತಂದೆಗೆ ಮಾರಣಾಂತಿಕ ಹಲ್ಲೆ!

ಮೂತ್ರಪಿಂಡಗಳ ಆರೋಗ್ಯ ಕಾಪಾಡಲು ಈ ಕ್ರಮಗಳನ್ನು ಅನುಸರಿಸಿ!

12 ವರ್ಷಗಳ ಬಳಿಕ ಒಂದಾದ ತಾಯಿ ಮಗ | ವಿಶ್ವಾಸದ ಮನೆಯಲ್ಲೊಂದು ಭಾವನಾತ್ಮಕ ಸನ್ನಿವೇಶ

ದೇವಸ್ಥಾನದಲ್ಲಿ ಕೇಳಬಾರದ ಪ್ರಶ್ನೆ ಕೇಳಿದ ಪತ್ರಕರ್ತನ ವಿರುದ್ಧ ನಟಿ ಸಮಂತಾ ಆಕ್ರೋಶ!

ಪ್ರಧಾನಿ ಮೋದಿಗೆ ಪರ್ಯಾಯ ರಾಹುಲ್ ಅಲ್ಲ, ಮಮತಾ ಬ್ಯಾನರ್ಜಿ | ಜಾಗೋ ಬಾಂಗ್ಲಾ ವರದಿ

ಇತ್ತೀಚಿನ ಸುದ್ದಿ