ಟಿವಿ ನೋಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಸಾವು - Mahanayaka

ಟಿವಿ ನೋಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಸಾವು

heart attack
21/09/2024

ಹಾಸನ: 11 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ  ಜಿಲ್ಲೆಯ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಗ್ರಾಮದ ಕಾವ್ಯಶ್ರೀ ಅವರ ಮಗ ಸಚಿನ್ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಇದ್ದಲ್ಲಿಯೇ ಸಚಿನ್ ಕೊನೆಯುಸಿರೆಳೆದಿದ್ದಾರೆ. ನಿನ್ನೆ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಸಚಿನ್ ಗೆ  ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದರು.

ಆದರೆ ಆತ ಏನು ಮಾತನಾಡದೆ ಇರುವುದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾವನ್ನಪ್ಪಿದ್ದ ಎಂದು ವೈದ್ಯರು ಪೋಷಕರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ