ಸ್ವಾತಂತ್ರ್ಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಾಲಕ ವಿದ್ಯುತ್ ಶಾಕ್ ಗೆ ಬಲಿ!

ತುಮಕೂರು: ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ 2ನೇ ತರಗತಿಯ ಬಾಲಕನೊಬ್ಬ ನೆಲದಲ್ಲಿ ಬಿದ್ದಿದ್ದ ತಂತಿ ಸ್ಪರ್ಶಿಸಿ ದಾರುಣವಾಗಿ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿ ಎಚ್. ಕಾವಲ್ ಬಳಿ ನಡೆದಿದೆ.
ಹೇಮಂತ್ (8) ಮೃತಪಟ್ಟ ಬಾಲಕನಾಗಿದ್ದಾನೆ. ಈತ ಹೆಚ್ ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ಇಂದು ಬೆಳಗ್ಗೆ ಇಂದು ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ. ನಂತರ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದಾನೆ. ಪರಿಣಾಮವಾಗಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕ ಬಲಿ:
ವಿದ್ಯುತ್ ತಂತಿಗಳನ್ನು ಸರಿಯಾಗಿ ನಿರ್ವಹಿಸುವಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದೇ, ಬಾಲಕನ ಸಾವಿಗೆ ಕಾರಣವಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ವಿದ್ಯುತ್ ತಂತಿಗಳು ಅಪಾಯಕ್ಕೆ ಕಾರಣವಾಗುತ್ತಿದೆ ಅಂತ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರೂ, ಯಾವುದೇ ಕ್ರಮಕೈಗೊಂಡಿರಲಿಲ್ಲ. ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕನೊಬ್ಬ ಬಲಿಯಾಗಿದ್ದಾನೆ. ಘಟನೆ ಸಂಬಂಧ ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: