ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಬಾಲಕನ ದಾರುಣ ಸಾವು
ಕೇರಳ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಎರಡೂವರೆ ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಚ್ಚಿಯ ತ್ರಿಪುನಿತರಾದಲ್ಲಿ ನಡೆದಿದೆ.
ಮೃತ ಬಾಲಕನನ್ನು ಪುತ್ತಿಕಾವ್ ಊಪಿಡಿತ್ತಾರ ರಂಜಿತ್ ಹಾಗೂ ರಮ್ಯ ದಂಪತಿಯ ಪುತ್ರ ಆದಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಾಲಕನ ತಾಯಿಯ ಕಾಲು ಮತ್ತು ತಲೆಗೆ ಗಾಯಗಳಾಗಿದ್ದು, ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಅತೀ ವೇಗವಾಗಿ ಚಲಿಸುತ್ತಿದ್ದರಿಂದ ಈ ಘಟನೆ ನಡೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರು ಚಾಲಕನನ್ನು ಪೋಲಿಸರು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























