ಗೋಧಿ ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಬಾಲಕನ ದೇಹ ಛಿದ್ರ!

ಉತ್ತರಪ್ರದೇಶ: ಗೋಧಿ ಕಟಾವು ಮೆಷಿನ್ ನೊಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು, ಘಟನೆಯಲ್ಲಿ ಯಂತ್ರದಲ್ಲಿ ಸಿಲುಕಿದ್ದ ಬಾಲಕನ ದೇಹ ಛಿದ್ರ ಛಿದ್ರಗೊಂಡಿದೆ.
ಬಾಲಕ ಜಮೀನಿನಲ್ಲಿ ಗೋಧಿ ಕಟಾವು ಯಂತ್ರ ನಿರ್ವಹಿಸುತ್ತಿದ್ದ. ಆದರೆ ಏಕಾಏಕಿ ಜೋರಾಗಿ ಗಾಳಿ ಬೀಸಿದ್ದು, ಗಾಳಿಯ ರಭಸಕ್ಕೆ ಯಂತ್ರದ ಮೇಲಿನ ಟಾರ್ಪಾಲಿನ್ ಹಾರಿ ಹೋಗಿದ್ದು, ಈ ವೇಳೆ ಬಾಲಕ ಯಂತ್ರದೊಳಗೆ ಸಿಲುಕಿದ್ದಾನೆ.
ಬಾಲಕನ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಓಡಿ ಬಂದಿದ್ದು, ಈ ವೇಳೆ ಬಾಲಕನ ದೇಹ ಛಿದ್ರಛಿದ್ರಗೊಂಡಿರುವ ದೃಶ್ಯ ಕಂಡು ಬಂದಿತ್ತು. ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಚ್ಚಿಬೀಳಿಸುವಂತಿದೆ. ಘಟನೆಯ ಬಳಿಕ ಮೃತದೇಹವನ್ನು ಯಂತ್ರದಿಂದ ಹೊರ ತೆಗೆಯಲು ಹರಸಾಹಸ ಪಡುವಂತಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth