ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ: ಕೋಟ ಶ್ರೀನಿವಾಸ ಪೂಜಾರಿ - Mahanayaka
10:55 PM Monday 15 - September 2025

ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ: ಕೋಟ ಶ್ರೀನಿವಾಸ ಪೂಜಾರಿ

kota shreenivas poojari
03/08/2022

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.


Provided by

ವಿಕಾಸಸೌಧದಲ್ಲಿ ಮಂಗಳವಾರ 2022-23ನೇ ಸಾಲಿನ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ  ನಡೆಸಿ ಅವರು, ಪರಿಶಿಷ್ಟ ಜಾತಿ, ಪಂಗಡದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ 75ಯೂನಿಟ್ ವಿದ್ಯುತ್ ಸರಬರಾಜು ಮಾಡುವ ಯೋಜನೆ ರೂಪಿಸಿದ್ದು ಇಂಧನ ಇಲಾಖೆ ಅಧಿಕಾರಿಗಳು ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕೆಂದು ಅವರು ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 20 ಸಾವಿರ ರೂ.ಗಳ ಘಟಕ ಯೋಜನೆಯ ಸಹಾಯಧನದಲ್ಲಿ ಸ್ವಚ್ಚ ಭಾರತ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಅವರು ತಿಳಿಸಿದರು.

ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ವಿಶೇಷವಾಗಿ ಈ ಸಮುದಾಯಕ್ಕೆ ವಸತಿ ಯೋಜನೆ ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ರಾಜ್ಯದಲ್ಲಿ ಶಾಲಾ ಕಟ್ಟಡಗಳ ಅವಶ್ಯಕತೆ ಇದ್ದು, ಶೇ.50ಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳು ಇರುವ ಶಾಲೆಗಳ ಕಟ್ಟಡ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಶೀಘ್ರವೇ ಕೈಗೆತ್ತಿಕೊಳ್ಳುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಇಲಾಖೆ ಆಯುಕ್ತ ಡಾ.ಕೆ.ರಾಕೇಶ್ ಕುಮಾರ್, ಇಲಾಖೆ ಸಲಹೆಗಾರರಾದ ಡಾ.ವೆಂಕಟಯ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ