ಮೆದುಳು ನಿಷ್ಕ್ರೀಯಗೊಂಡ ನಂತರ  ಅಂಗದಾನದ ಮೂಲಕ ಸಾರ್ಥಕತೆ  ಮೆರೆದ ಎಂಐಟಿ ವಿದ್ಯಾರ್ಥಿ - Mahanayaka

ಮೆದುಳು ನಿಷ್ಕ್ರೀಯಗೊಂಡ ನಂತರ  ಅಂಗದಾನದ ಮೂಲಕ ಸಾರ್ಥಕತೆ  ಮೆರೆದ ಎಂಐಟಿ ವಿದ್ಯಾರ್ಥಿ

manipal
12/10/2022

ಮಣಿಪಾಲ: ಮಣಿಪಾಲ — ಉಡುಪಿ ರಸ್ತೆಯಲ್ಲಿ ಅಕ್ಟೋಬರ್  9ರಂದು ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಎಂಐಟಿ ವಿದ್ಯಾರ್ಥಿ 19 ವರ್ಷ ವಯಸ್ಸಿನ ವೆಮುಲಾ ಸುದರ್ಶನ್ ಚೌಧರಿ ಅವರು ಅಂಗಾಂಗ ದಾನದ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಆಂಧ್ರಪ್ರದೇಶ ಮೂಲದ ವೆಮುಲ ಅಲೇಖಾ ಪ್ರಸಾದ್   ಇವರ  ಮಗನಾದ ವೆಮುಲಾ ಸುದರ್ಶನ್ ಚೌಧರಿ ಅವರು ಅಕ್ಟೋಬರ್  9ರಂದು ರಾತ್ರಿ 8:40ರ ವೇಳೆಗೆ ಅಪಘಾತಕ್ಕೀಡಾಗಿದ್ದರು. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸತತ ಪ್ರಯತ್ನದ ಬಳಿಕವೂ ಸುದರ್ಶನ್ ಚೌಧರಿ ಅವರನ್ನು ರಕ್ಷಿಸಲು ಸಾಧ್ಯವಾಗದಿದ್ದ ವೇಳೆ ಸುದರ್ಶನ್ ಅವರ ಕುಟುಂಬಸ್ಥರು ಅಂಗಾಂಗ ದಾನ ನಡೆಸಲು ಮುಂದಾದರು.

ಕುಟುಂಬಸ್ಥರ ನಿರ್ಧಾರದಂತೆ ವಿವಿಧ ಆಸ್ಪತ್ರೆಗಳಲ್ಲಿ ನೋಂದಾಯಿತ ರೋಗಿಗಳಿಗೆ ಯಕೃತ್ತು, ಶ್ವಾಸಕೋಶ, ಮೂತ್ರಪಿಂಡ, ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳು ಮತ್ತು ಚರ್ಮ ದಾನ ಮಾಡುವ ಮೂಲಕ ಸುದರ್ಶನ್ ಅವರು ಹಲವು ರೋಗಿಗಳ ಬಾಳಿಗೆ ಬೆಳಕಾಗಿದ್ದಾರೆ.


“ಅಂಗದಾನ ಒಂದು ಪುಣ್ಯದ ಕೆಲಸ. ಸುದರ್ಶನ್   ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ”.

–ತಂದೆ ವೆಮುಲ ಅಲೇಖಾ ಪ್ರಸಾದ್


“ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಲ್ಲಿ ದಿನದಿಂದ ದಿನಕ್ಕೆ ಜಾಗೃತಿ ಹೆಚ್ಚಾಗುತ್ತಿರುವುದು ಒಳ್ಳೆಯ ಸಂಗತಿ.”

–ಡಾ.ಅವಿನಾಶ ಶೆಟ್ಟಿ, ವೈದ್ಯಕೀಯ ಅಧೀಕ್ಷಕ


ದಾನ  ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಮತ್ತು ಬೆಂಗಳೂರಿಗೆ  ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ