5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಮತ್ತೆ ಬ್ರೇಕ್!
ನವದೆಹಲಿ: ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಮತ್ತೆ ಬ್ರೇಕ್ ಬಿದ್ದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ಈಗಾಗಲೇ ಮುಗಿದಿದೆ. ಇಂದು ಫಲಿತಾಂಶ ಪ್ರಕಟವಾಗಬೇಕಿತ್ತು. ಫಲಿತಾಂಶ ಹೊರಬೀಳುವುದಕ್ಕೂ ಮುನ್ನ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ಜಸ್ಟೀಸ್ ತ್ರಿವೇದಿ ಮತ್ತು ಪಂಕಜ್ ಮಿತ್ತಲ್ ನೇತೃತ್ವದ ಪೀಠದಿಂದ ಈ ಮಹತ್ವದ ಆದೇಶ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth