ಪ್ರವಾಸಿಗರ ಹುಚ್ಚಾಟಕ್ಕೆ ಬ್ರೇಕ್: ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಮೂಡಿಗೆರೆಯ ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದರು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು.
ರೋಗಿಯನ್ನು ಹೊತ್ತ ಆಂಬುಲೆನ್ಸ್ ಕೂಡ ರಸ್ತೆಯಲ್ಲಿ ನಿಲ್ಲುವಂತಹ ಪರಿಸ್ಥಿತಿ ಈ ಜಲಪಾತದ ಬಳಿ ನಡೆದಿತ್ತು. ಜಲಪಾತ ನೋಡಲು ಹೋಗಿ ಬಂಡೆಯಿಂದ ಬಿದ್ದು ಕೈಕಾಲು ಮುರಿದುಕೊಂಡವರು ಕೂಡ ಇದ್ದಾರೆ. ಆದ್ರೆ ಇದೀಗ ಇವೆಲ್ಲದಕ್ಕೂ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ.
ಮೂಡಿಗೆರೆಯ ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಳೆ ಬಿಟ್ಟ ತಕ್ಷಣವೇ ಈ ಭಾಗದಲ್ಲಿ ಪೊಲೀಸರು ಪ್ರತ್ಯಕ್ಷವಾಗಿದ್ದಾರೆ.
ಈ ಭಾಗದಲ್ಲಿ ಪ್ರವಾಸಿಗರ ಹುಚ್ಚಾಟದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಇದೀಗ ಹೈವೆ ಪ್ಯಾಟ್ರೋಲ್ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಭಾಗದಲ್ಲಿ ಇಡೀ ದಿನ ಪೊಲೀಸರು ಮೊಕ್ಕಾಂ ಹೂಡಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw