ಲಂಚ ಪಡೆಯುವ ಶಾಸಕರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಹೊಣೆಗಾರರು: ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ

ಲಂಚವನ್ನು ಸಂಸತ್ತಿನ ಸವಲತ್ತುಗಳಿಂದ ರಕ್ಷಿಸಲಾಗಿಲ್ಲ. ಭ್ರಷ್ಟಾಚಾರ ಅಥವಾ ಸಂಸದರು ಲಂಚ ಪಡೆಯುವುದು ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಯನ್ನು ನಾಶಪಡಿಸುತ್ತದೆ. ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಲಂಚ ಪಡೆಯುವ ಶಾಸಕರೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಹೊಣೆಗಾರರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಹೇಳಿದೆ.
ಸಂಸತ್ತಿನಲ್ಲಿ ಭಾಷಣ ಮಾಡಲು ಮತ್ತು ಮತಗಳಿಗಾಗಿ ಲಂಚ ಪಡೆಯುವ ಪ್ರಕರಣಗಳಲ್ಲಿ ಸಂಸದರು, ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಈ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಂವಿಧಾನ ಪೀಠ ರದ್ದುಗೊಳಿಸಿದೆ. ಮೂಲಕ ಮತ್ತೊಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ಸಂಸತ್‌ನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಸಂಸದರು, ಶಾಸಕರು ಲಂಚ ಪಡೆಯುವ ಪ್ರಕರಣಗಳಲ್ಲಿ ಕಾನೂನು ಕ್ರಮದ ವಿನಾಯಿತಿ ಒದಗಿಸಿದ್ದ ಐವರು ಸದಸ್ಯರ ಸಂವಿಧಾನ ಪೀಠದ 1998ರ ತೀರ್ಪನ್ನು ಇಂದಿನ ತೀರ್ಪು ರದ್ದುಗೊಳಿಸಿದೆ.
1998ರಲ್ಲಿ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ಪಿವಿ ನರಸಿಂಹ ರಾವ್ ವಿರುದ್ಧ ಸಿಬಿಐ ಪ್ರಕರಣದಲ್ಲಿ ನೀಡಿದ ಬಹುಮತದ ತೀರ್ಪಿನಲ್ಲಿ, 105 (2) ನೇ ವಿಧಿಯ ಅಡಿಯಲ್ಲಿ ಸದನದ ಒಳಗೆ ಮಾಡಿದ ಯಾವುದೇ ಭಾಷಣ ಮತ್ತು ಮತಕ್ಕಾಗಿ ಕ್ರಿಮಿನಲ್ ಮೊಕದ್ದಮೆಯ ವಿರುದ್ಧ ಸಂಸದರಿಗೆ ವಿನಾಯಿತಿ ಇದೆ ಎಂದು ಹೇಳಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth