ಇಟ್ಟಿಗೆ ಭಟ್ಟಿಯ ಗೋಡೆ ಕುಸಿದು 6 ಮಂದಿ ಕಾರ್ಮಿಕರ ದಾರುಣ ಸಾವು - Mahanayaka

ಇಟ್ಟಿಗೆ ಭಟ್ಟಿಯ ಗೋಡೆ ಕುಸಿದು 6 ಮಂದಿ ಕಾರ್ಮಿಕರ ದಾರುಣ ಸಾವು

haridhwar
26/12/2023


Provided by

ಹರಿದ್ವಾರ: ಇಟ್ಟಿಗೆ ಭಟ್ಟಿಯ ಗೋಡೆ ಕುಸಿದು ಆರು ಕಾರ್ಮಿಕರು ಸಾವನ್ನಪ್ಪಿ,  ನಾಲ್ವರು ಗಾಯಗೊಂಡಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾಬೋಲಿ ಗ್ರಾಮದ ಸಾನ್ವಿ ಇಟ್ಟಿಗೆ ಭಟ್ಟಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳದಲ್ಲಿದ್ದ ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ದೋಭಾಲ್ ತಿಳಿಸಿದ್ದಾರೆ.

ನಾವು ಅಪಘಾತಕ್ಕೆ ಕಾರಣವಾದ ಸಂದರ್ಭಗಳನ್ನು ಪರಿಶೀಲಿಸುತ್ತಿದ್ದೇವೆ. ತಪ್ಪಿತಸ್ಥರು ಯಾರೇ ಆದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ದೋಭಾಲ್ ಹೇಳಿದ್ದಾರೆ.

ಇನ್ನೂ ಗೋಡೆಯ ಅವಶೇಷಗಳಡಿಯಲ್ಲಿ ಸಿಲುಕಿ ಒಂದು ಕುದುರೆ ಸಹ ಮೃತಪಟ್ಟಿದೆ ಎಂದು  ಪೊಲೀಸರು ತಿಳಿಸಿದ್ದಾರೆ.  ಘಟನೆಯ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ಧೀರಜ್ ಸಿಂಗ್ ಗಾರ್ಬಿಯಾಲ್ ಅವರು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ