11:29 AM Thursday 22 - January 2026

ಬೇಕೂಂತಲೇ ಸೇತುವೆ ಉರುಳಿಸಲಾಗಿದೆ: ಬಿಹಾರ ಡಿಸಿಎಂ ತೇಜಸ್ವಿ ಕಿಡಿ

05/06/2023

ಬಿಹಾರದಲ್ಲಿ ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಕೆಡವಲಾಗಿದೆ ಎಂದು ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಳೆದ ವರ್ಷದ ಏಪ್ರಿಲ್ 30ರಂದು ಈ ಸೇತುವೆಯ ಒಂದು ಭಾಗ ಕುಸಿತದ ಬಳಿಕ ನಾವು ಐಐಟಿ-ರೂರ್ಕಿಯನ್ನು ಸಂಪರ್ಕಿಸಿದೆವು. ಇವರು ನಡೆಸಿದ ಅಂತಿಮ ವರದಿ ಇನ್ನೂ ಕೈಸೇರಬೇಕಿದೆ. ಆದರೆ ಸೇತುವೆಯ ರಚನೆಯನ್ನು ಅಧ್ಯಯನ ಮಾಡಿದ ತಜ್ಞರು ಗಂಭೀರ ದೋಷಗಳಿವೆ ಎಂದು ನಮಗೆ ತಿಳಿಸಿದ್ದರು ಎಂದು ಹೇಳಿಕೆ ನೀಡಿದ್ದರು.

1,700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿದ್ದ ಈ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಉರುಳಿಸಿದ್ದೇವೆ ಎಂಬ ಡಿಸಿಎಂ ಹೇಳಿಕೆ ವಿಪಕ್ಷಗಳಿಗೆ ಆಹಾರವಾಗಿದ್ದು ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ನಿರ್ಮಾಣದ ಹೊಣೆ ಹೊತ್ತಿರುವ ಎಸ್‍ಪಿ ಸಿಂಗ್ಲಾ ಕಂಪನಿ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಎಂದು ಅಧಿಕಾರಿಗಳಿಗೆ ಸಿಎಂ ನಿತೀಶ್ ಕುಮಾರ್ ಆದೇಶ ಕೂಡಾ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version