ಮಧ್ಯರಾತ್ರಿ ಕಾಳಿ ನದಿಯ ಮೇಲಿನ ಸೇತುವೆ ಕುಸಿತ!
07/08/2024
ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿಯ ಮೇಲಿನ ಸೇತುವೆ, ಬುಧವಾರ ರಾತ್ರಿ 1:50 ರ ಸುಮಾರಿಗೆ ಕುಸಿದಿದ್ದು, ಗೋವಾದಿಂದ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರೀ ಸಂಚಾರ ಸ್ಥಗಿತಗೊಂಡಿದೆ.
ಸೇತುವೆ ಕುಸಿತದಿಂದಾಗಿ ನದಿಗೆ ಬಿದ್ದಿದ್ದ ಲಾರಿ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಾಲಕ ಆರೋಗ್ಯದಿಂದ ಇದ್ದಾರೆ.
ಕಾಳಿನದಿಯ ಮೇಲಿನ ಮತ್ತೊಂದು ಸೇತುವೆ ರಸ್ತೆಯ ದೃಢತೆಯ ಬಗ್ಗೆ ಪರಿಶೀಲನ ಪ್ರಮಾಣ ಪತ್ರವನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth