ಮುರಿದ ತುಂಗಭದ್ರಾ ಜಲಾಶಯದ ಗೇಟ್: ನದಿ ಪಾತ್ರದ ಜನರಿಗೆ ಆತಂಕ - Mahanayaka
8:24 PM Saturday 14 - September 2024

ಮುರಿದ ತುಂಗಭದ್ರಾ ಜಲಾಶಯದ ಗೇಟ್: ನದಿ ಪಾತ್ರದ ಜನರಿಗೆ ಆತಂಕ

thunga badra
11/08/2024

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿದೆ. ಹೀಗಾಗಿ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗ್ತಿದೆ. ಇದರಿಂದಾಗಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ರೆ ಮಾತ್ರವೇ ಗೇಟ್ ಗೆ ಏನಾಗಿದೆ ಎಂಬುದನ್ನ ನೋಡೋದಕ್ಕೆ ಸಾಧ್ಯ ಅಂತ ಹೇಳಲಾಗಿದೆ.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನ ಚೈನ್ ಲಿಂಕ್ ಶನಿವಾರ ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ 105 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್ ನೀರನ್ನ ಹೊರಬಿಡಲಾಗುತ್ತಿದೆ.


Provided by

ನದಿ ಪಾತ್ರದ ಜನರು ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನೀರಾವರಿ ಇಲಾಖೆಯ ಉನ್ನತ ಅಧಿಕಾರಿಗಳು ಈಗಾಗಲೇ ಬೆಂಗಳೂರಿನಿಂದ ಹೊರಟಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

.

 

ಇತ್ತೀಚಿನ ಸುದ್ದಿ