ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರು: ಪ್ರಕೃತಿಯ ಆಟ ಎಂಥ ಘೋರ - Mahanayaka
3:00 PM Tuesday 18 - November 2025

ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರು: ಪ್ರಕೃತಿಯ ಆಟ ಎಂಥ ಘೋರ

udupi
16/02/2023

ಉಡುಪಿ : ಅಣ್ಣ ಹಾಗೂ ತಮ್ಮ ಒಂದೇ ದಿನ ಸಾವನ್ನಪ್ಪಿದ ಘಟನೆ ಗುರುವಾರ ಬ್ರಹ್ಮಾವರ ತಾಲೂಕಿನ ದೇವಾಡಿಗರಬೆಟ್ಟು ಎಂಬಲ್ಲಿ ಸಂಭವಿಸಿದೆ.

ದೇವಾಡಿಗರಬೆಟ್ಟು ರಘುನಾಥ ದೇವಾಡಿಗ ಹಾಗೂ ಸುಮತಿ ದೇವಾಡಿಗ ಅವರ ಪುತ್ರರಾದ ರಾಘವೇಂದ್ರ ಯಾನೇ ಮೋನ (40) ಗಣೇಶ್ ದೇವಾಡಿಗ (51) ಸಾವನ್ನಪ್ಪಿದವರು.

ಗುರುವಾರ ಬೆಳಗ್ಗೆ ರಾಘವೇಂದ್ರ ಯಾನೆ ಮೋನ ಇವರು ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದು, ಸುದ್ದಿ ತಿಳಿದು ಮಧ್ಯಾಹ್ನ ಗಣೇಶ್ ದೇವಾಡಿಗ ಅವರೂ ಕೂಡ ಮೃತಮಟ್ಟಿದ್ದಾರೆ. ಇವರು ಇಬ್ಬರೂ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು.

ಇಬ್ಬರೂ ಕೂಡ ವಾದ್ಯ ಸಂಗೀತ ದಲ್ಲಿ ನಾಡಿನಾದ್ಯಂತ ಪ್ರಸಿದ್ಧಿ ಪಡೆದವರಾಗಿದ್ದು, ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರಿಬ್ಬರ ಸಾವಿಗೆ ಇಡೀ ಗ್ರಾಮವೇ ಮರುಕ ಪಡುತ್ತಿದೆ.
ಅದರಲ್ಲೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜವರಾಯ ಸಹೋದರರಿಬ್ಬರನ್ನು ಒಂದೇ ದಿನ ಬಲಿ ಪಡೆದು ಕುಟುಂಬಕ್ಕೆ ಆಘಾತ ನೀಡಿದ್ದಾನೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ