ತೋಟದ ಮನೆಯಲ್ಲಿ ಕಾರ್ಮಿಕನ ಕತ್ತು ಕುಯ್ದು ಭೀಕರ ಕೊಲೆ

chikkamagaluru crime news
08/11/2026

ಚಿಕ್ಕಮಗಳೂರು/ಕಡೂರು:  ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದಲ್ಲಿ ನಡೆದಿದೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ತಿರುಪತಿಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಣ (52) ಕೊಲೆಯಾದ ದುರ್ದೈವಿ. ಇವರು ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಬಳಿ ಇರುವ ತೋಟವೊಂದರ ಉಸ್ತುವಾರಿ ಹಾಗೂ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದರು.

ಶುಕ್ರವಾರ ರಾತ್ರಿ ತೋಟದಲ್ಲೇ ತಾನು ವಾಸವಿದ್ದ ಮನೆಯಲ್ಲಿದ್ದಾಗ ಅಪರಿಚಿತ ಕಿಡಿಗೇಡಿಗಳು ಮನೆಯೊಳಗೆ ನುಗ್ಗಿ, ಲಕ್ಷ್ಮಣ ಅವರ ಕತ್ತು ಕುಯ್ದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಲಕ್ಷ್ಮಣ ಅವರ ಹತ್ಯೆಗೆ ನಿಖರವಾದ ಕಾರಣ ಇದುವರೆಗೂ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಜೀತೇಂದ್ರ ಕುಮಾರ್ ದಾಯ್ಮಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಕಡೂರು ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler
Exit mobile version