ಒಳ ನುಸುಳಲು ಯತ್ನಿಸಿದ ಭಯೋತ್ಪಾದಕರಿಗೆ ಚಟ್ಟಕಟ್ಟಿದ ಬಿಎಸ್ ಎಫ್ ಯೋಧರು - Mahanayaka

ಒಳ ನುಸುಳಲು ಯತ್ನಿಸಿದ ಭಯೋತ್ಪಾದಕರಿಗೆ ಚಟ್ಟಕಟ್ಟಿದ ಬಿಎಸ್ ಎಫ್ ಯೋಧರು

bsf
09/05/2025

ನವದೆಹಲಿ: ಜುಮ್ಮು ಬಳಿಯ ಭಾರತ—ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಮೂಲಕ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ 7 ಭಯೋತ್ಪಾದಕರಿಗೆ ಭಾರತೀಯ ಗಡಿಭದ್ರತಾ ಪಡೆ(BSF) ಚಟ್ಟಕಟ್ಟಿದೆ.

ಗುರುವಾರ ತಡರಾತ್ರಿ ಸಾಂಬಾ ಸೆಕ್ಟರ್ ನಲ್ಲಿ ಉಗ್ರರು ಒಳನುಸುಳಲು ಯತ್ನಿಸಿದ್ದಾರೆ. ಈ ವೇಳೆ ಸೇನೆ ಕಾರ್ಯಾಚರಣೆ ನಡೆಸಿದೆ.  ದಂಧಾರ್ ನಲ್ಲಿರುವ ಪಾಕಿಸ್ತಾನ ರೇಂಜರ್ಸ್ ಪೋಸ್ಟ್ ಮೇಲೆ ಗುಂಡಿನ ದಾಳಿ ನಡೆಸಲಾಯಿತು.

ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. 7 ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಅಲ್ಲದೇ ಪಾಕಿಸ್ತಾನದ ದಂಧಾರ್ ರೇಂಜರ್ಸ್ ಪೋಸ್ಟ್ ಗೆ ತೀವ್ರ ಹಾನಿ ಮಾಡಲಾಗಿದೆ ಎಂದು ಗಡಿ ಭದ್ರತಾ ಪಡೆ ರೇಂಜರ್ಸ್ ಥರ್ಮಲ್ ನ ಚಿತ್ರವನ್ನು ಬಿಡುಗಡೆ ಮಾಡಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ