ಆಕಸ್ಮಿಕವಾಗಿ ಗಡಿದಾಟಿ ಪಾಕ್ ನಿಂದ ಬಂಧನಕ್ಕೊಳಗಾಗಿದ್ದ BSF ಯೋಧ ಬಿಡುಗಡೆ

ನವದೆಹಲಿ: ಆಕಸ್ಮಿಕವಾಗಿ ಭಾರತದ ಗಡಿದಾಟಿ ಪಾಕಿಸ್ತಾನಕ್ಕೆ ಹೋಗಿ ಪಾಕ್ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಕದನ ವಿರಾಮ ನೀತಿಯ ಅನುಸಾರ ಪಾಕಿಸ್ತಾನ ಬಿಡುಗಡೆ ಮಾಡಿದ್ದು, ವಾಘಾ ಗಡಿಯ ಮೂಲಕ ಅವರು ಭಾರತಕ್ಕೆ ಮರಳಿದ್ದಾರೆ.
ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್ನಲ್ಲಿ ಬೆಳಿಗ್ಗೆ 10:30 ರ ಸುಮಾರಿಗೆ ಹಸ್ತಾಂತರ ನಡೆಯಿತು. ಪ್ರಸ್ತುತ ಭದ್ರತಾ ಅಧಿಕಾರಿಗಳು ಶಾ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಏಪ್ರಿಲ್ 23 ರಂದು ಪಂಜಾಬ್ ನ ಫಿರೋಜ್ ಪುರ ಬಳಿ ಅಂತಾರಾಷ್ಟ್ರೀಯ ಗಡಿಯನ್ನು ಅಜಾಗರೂಕತೆಯಿಂದ ದಾಟಿದ ನಂತರ 182 ನೇ ಬೆಟಾಲಿಯನ್ ನ ಬಿಎಸ್ ಎಫ್ ಜವಾನ್ ಶಾ ಅವರನ್ನು ಪಾಕಿಸ್ತಾನ ರೇಂಜರ್ ಗಳು ಬಂಧಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD